ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕೋವಿಡ್-19 ಲಸಿಕಾ ಮಹಾಮೇಳದ ಅಂಗವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಲಸಿಕಾ ಅಭಿಯಾನ ಕಾರ್ಯಕ್ರಮ ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ನಡೆಯಿತು.
ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ರಾಜ್ಯ ಸರಕಾರ ಗುರುತಿಸಿದ ದುರ್ಬಲ ವರ್ಗದ ಗುಂಪಿನವರಿಗೆ ಹಾಗೂ ರಾಜ್ಯ ಕರೋನಾ ಮುಂಚೂಣಿ ಕಾರ್ಯಕರ್ತರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಪ್ರತಿಯೊಬ್ಬರೂ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡು ಕರೋನಾವನ್ನು ಹೊಡೆದೊಡಿಸಬೇಕು. ಗಂಗೊಳ್ಳಿಯನ್ನು ಕರೋನಾ ಮುಕ್ತ ಗ್ರಾಮವನ್ನಾಗಿ ಮಾಡಲು ಎಲ್ಲರೂ ಆರೋಗ್ಯ ಇಲಾಖೆ ಹಾಗೂ ಗ್ರಾಪಂ.ಗೆ ಸಹಕಾರ ನೀಡಬೇಕು ಎಂದರು.
ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ, ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗ್ರಾಪಂ ಸದಸ್ಯರಾದ ನಾಗರಾಜ ಖಾರ್ವಿ ಗುಡ್ಡೆಕೇರಿ, ಮಂತಿ ಶ್ರೀನಿವಾಸ ಖಾರ್ವಿ, ಪ್ರಶಾಂತ ಖಾರ್ವಿ, ಬಿ.ರಾಘವೇಂದ್ರ ಪೈ, ಬಿ.ಗಣೇಶ ಶೆಣೈ, ಬಿ.ಲಕ್ಷ್ಮೀಕಾಂತ ಮಡಿವಾಳ, ಶಾಂತಿ ಖಾರ್ವಿ, ನಿರ್ಮಲಾ ಪೂಜಾರಿ, ಸಮಿತಾ ಶೇರುಗಾರ್, ಗ್ರಾಪಂ ಸದಸ್ಯರು, ಸಿಬ್ಬಂದಿಗಳು, ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತಿತರು ಉಪಸ್ಥಿತರಿದ್ದರು.
ಆಶಾ ಕಾರ್ಯಕರ್ತೆ ಕಲ್ಪನಾ ಶೇರುಗಾರ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಶುಶ್ರೂಷಕಿ ಶೋಭಾ ವಂದಿಸಿದರು.