Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಕೋವಿಡ್ -19 ನ ಎರಡನೇ ಅಲೆ ಹಿನ್ನೆಲೆಯಲ್ಲಿ ಜಾರಿಯಾಗಿದ್ದ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಚಲನಚಿತ್ರ ಮತ್ತು ಕಿರುತೆರೆ ಕಲಾವಿದರು ಮತ್ತು ತಂತ್ರಜ್ಞರು ಹಾಗೂ ಚಲನಚಿತ್ರ ಮಂದಿರದ ಕಾರ್ಮಿಕರಿಗೆ ಮುಖ್ಯಮಂತ್ರಿ ಯವರು ಘೋಷಿಸಿದ್ದ 3,000 ರೂ. ಮೊತ್ತದ ವಿಶೇಷ ಆರ್ಥಿಕ ಪ್ಯಾಕೇಜ್ನ ನೆರವಿಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆನ್ಲೈನ್ ಅರ್ಜಿ ಆಹ್ವಾನಿಸಿದೆ.

    Click Here

    Call us

    Click Here

    ರಾಜ್ಯದಲ್ಲಿ ಎರಡನೇ ಅಲೆಯ ವೇಳೆ ಸರ್ಕಾರ ವಿಧಿಸಿದ್ದ ನಿರ್ಬಂಧದಿದಾಗಿ ಬಾಧಿತರಾಗಿದ್ದ ಸಮಾಜದ ವಿವಿಧ ವರ್ಗದವರಿಗೆ ಮುಖ್ಯಮಂತ್ರಿ ಯವರು 2021 ರ ಜೂನ್ 3 ರಂದು ವಿಶೇಷ ಪರಿಹಾರದ ಎರಡನೇ ಪ್ಯಾಕೇಜ್ ಅನ್ನು ಘೋಷಣೆ ಮಾಡಿದ್ದರು. ಇದರಲ್ಲಿ ಚಲನಚಿತ್ರೋದ್ಯಮ ಹಾಗೂ ಕಿರುತೆರೆ ಮಾಧ್ಯಮದಲ್ಲಿ ತೊಡಗಿಕೊಂಡಿರುವ ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ತಲಾ 3,000 ರೂ. ಪರಿಹಾರ ನೀಡಲು ಸರ್ಕಾರವು ನಿರ್ಧರಿಸಿತ್ತು. ಸರ್ಕಾರದ ಈ ನಿರ್ಧಾರದಿಂದಾಗಿ 22,000 ನೋಂದಾಯಿತ ಕಾರ್ಮಿಕರಿಗೆ ಅನುಕೂಲವಾಗಲಿದೆ. ಇದಕ್ಕಾಗಿ ಅಂದಾಜು 6.60 ಕೋಟಿ ರೂ. ಮೀಸಲಿರಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ. ಪಿ.ಎಸ್. ಹರ್ಷ ಅವರು ತಿಳಿಸಿದ್ದಾರೆ.

    ಚಲನಚಿತ್ರ ರಂಗದವರು ಮತ್ತು ಕಿರುತೆರೆ ರಂಗದವರಿಗೆ ಆರ್ಥಿಕ ನೆರವನ್ನು ಆಧಾರ್ ಕಾರ್ಡ್ ಸಂಖ್ಯೆಯನ್ನು ಆಧರಿಸಿ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲು ಅನುವಾಗುವಂತೆ ಸೇವಾಸಿಂಧು ವೆಬ್ ಪೋರ್ಟಲ್ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ನಮೂನೆ ಮತ್ತು ಇನ್ನಿತರ ಷರತ್ತುಗಳಿಗಾಗಿ https://sevasindhu.karnataka.gov.in/Sevasindhu/Kannada?ReturnUrl=%2F ಭೇಟಿ ನೀಡಿ ಪಡೆದುಕೊಳ್ಳಬಹುದು.

    ಒಬ್ಬರಿಗೆ ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸುವವರು ಸಂಬಂಧಿತ ಸಂಘಗಳಲ್ಲಿ ಸದಸ್ಯತ್ವ ಹೊಂದಿರಬೇಕು ಮತ್ತು ಅಲ್ಲಿಂದ ಕಡ್ಡಾಯವಾಗಿ ಶಿಫಾರಸ್ಸು ಪತ್ರ ಪಡೆದು ಅದನ್ನು ಸೇವಾಸಿಂಧು ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಬೇಕಾಗಿದೆ. ಚಲನಚಿತ್ರ ಮಂದಿರಗಳಲ್ಲಿ ಕೆಲಸ ಮಾಡುವವರು ಭವಿಷ್ಯ ನಿಧಿ (ಪ್ರಾವಿಡೆಂಟ್ ಫಂಡ್) ಸಂಖ್ಯೆಯೊದಿಗೆ ಚಲನಚಿತ್ರ ಮಂದಿರದ ಮಾಲೀಕರ ಪತ್ರದೊಂದಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಆನ್ಲೈನ್ ಅರ್ಜಿಯು ಜುಲೈ 9 ರ ವರೆಗೆ ಸೇವಾಸಿಂಧು ಪೋರ್ಟಲ್ನಲ್ಲಿ ಲಭ್ಯವಿದೆ. ಆರ್ಥಿಕ ನೆರವಿನ ಅರ್ಜಿ ಇಲ್ಲವೇ ಶಿಫಾರಸ್ಸು ಪತ್ರಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಯಾವುದೇ ಕಚೇರಿಗಳಲ್ಲಿ ಸ್ವೀಕರಿಸಲಾಗುವುದಿಲ್ಲ. ಆರ್ಥಿಕ ನೆರವಿಗೆ ಸಂಬAಧಿಸಿದಂತೆ ಹೆಚ್ಚಿನ ಮಾಹಿತಿ ಮತ್ತು ಆನ್ಲೈನ್ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು, ತಾಂತ್ರಿಕ ಮಾರ್ಗದರ್ಶನದ ಅಗತ್ಯವಿದ್ದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿಯ ಮೊಬೈಲ್ ಸಂಖ್ಯೆ 8904645529 ಅನ್ನು ಸಂಪರ್ಕಿಸಬಹುದು ಇಲ್ಲವೆ dpmfilm1@gmail.comಗೆ ಇಮೇಲ್ ಮೂಲಕ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    5 + 7 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.