ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಗುರುವಾರ 123 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 7 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 45, ಕುಂದಾಪುರ, ಬೈಂದೂರು ತಾಲೂಕಿನ 50, ಕಾರ್ಕಳ, ಹೆಬ್ರಿ ತಾಲೂಕಿನ 24 ಮಂದಿಗೆ ಹಾಗೂ ಹೊರ ಜಿಲ್ಲೆಯ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.
ಒಟ್ಟು 123 ಪ್ರಕರಣಗಳಲ್ಲಿ 12 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 111 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ.
ಇಂದು ಉಡುಪಿ ತಾಲೂಕಿನ 69 ವರ್ಷದ ವೃದ್ಧೆ, 77 ವರ್ಷದ ವೃದ್ಧೆ, 57 ವರ್ಷದ ಪುರುಷ, 52 ವರ್ಷದ ಪುರುಷ, ಕಾರ್ಕಳ ತಾಲೂಕಿನ 67 ವರ್ಷದ ವೃದ್ಧೆ, 75 ವರ್ಷದ ವೃದ್ಧೆ, ಕುಂದಾಪುರ ತಾಲೂಕಿನ 70 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 209 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 1330 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3614 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ಜಿಲ್ಲೆಯಲ್ಲಿ ಇಂದು 7415 ಮಂದಿಗೆ ಮೊದಲನೇ ಡೋಸ್, 1033 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ ಒಟ್ಟು 3,86,213 ಮಂದಿಗೆ ಮೊದಲ ಡೋಸ್ ಹಾಗೂ 1,01,965 ಮಂದಿಗೆ ಎರಡನೇ ಡೋಸ್ ವಾಕ್ಸಿನ್ ನೀಡಲಾಗಿದೆ.
ಸೂಚನೆ: ಕುಂದಾಪುರ & ಬೈಂದೂರು ತಾಲೂಕನ್ನು ಸೇರಿಸಿ ಕುಂದಾಪುರ ಎಂದೂ, ಉಡುಪಿ, ಬ್ರಹ್ಮಾವರ, ಕಾಪು ಸೇರಿಸಿ ಉಡುಪಿ ಎಂದೂ, ಕಾರ್ಕಳ & ಹೆಬ್ರಿ ತಾಲೂಕನ್ನು ಸೇರಿಸಿ ಕಾರ್ಕಳ ಎಂದು ಆರೋಗ್ಯ ಇಲಾಖೆ ಪರಿಗಣಿಸಿದೆ.