ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ವೇಗವಾಗಿ ಬೆಳೆಯುತ್ತಿರುವ ಜಾಗತಿಕ ಮಟ್ಟದ ತಂತ್ರಜ್ಞಾನದ ಬೆಳವಣಿಗೆಗೆ ಅನುಗುಣವಾಗಿ ವಿದ್ಯಾರ್ಥಿಗಳ ಶಿಕ್ಷಣವು ರಂಗವೂ ಬೆಳೆಯುವ ಅವಶ್ಯಕತೆ ಇದೆ. ಆ ನಿಟ್ಟಿನಲ್ಲಿ ಸರ್ಕಾರ ಉಚಿತವಾಗಿ ನೀಡುತ್ತಿರುವ ಪಿಸಿ ಟ್ಯಾಬ್ಲೆಟ್ ಮತ್ತು ಸ್ಮಾರ್ಟ್ ಕ್ಲಾಸ್ ರೂಂನ ಸದುಪಯೋಗ ವಿದ್ಯಾರ್ಥಿಗಳು ಪಡೆದುಕೋಳ್ಳಬೇಕು ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಹೇಳಿದರು.
ಅವರು ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಪಿಸಿ ಟ್ಯಾಬ್ಲೆಟ್ ವಿತರಿಸಿ, ಆರು ಸ್ಮಾರ್ಟ್ ಕ್ಲಾಸ್ ರೂಮ್‌ಗಳನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕ್ ಮಾತನಾಡಿ ಸರಕಾರದ ಆದೇಶದ ಅನ್ವಯ ಪ್ರಥಮ ಪದವಿ ವ?ದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಿಸಿ ಟ್ಯಾಬ್ಲೆಟ್ ಕಾಲೇಜಿಗೆ ಸರಬರಾಜು ಆಗಿದ್ದು ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಇದನ್ನು ವಿತರಿಸಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಸ್ಮಾರ್ಟ್ ಕ್ಲಾಸ್ ರೂಂಗಳನ್ನು ದಕ್ಷವಾಗಿ ಬಳಸಿಕೋಳ್ಳಲಾಗುವುದು ಎಂದರು.
ಸಾಂಕೇತಿಕವಾಗಿ ಹತ್ತು ವಿದ್ಯಾರ್ಥಿಗಳಿಗೆ ಪಿಸಿ ಟ್ಯಾಬ್ಲೆಟ್ ವಿತರಿಸಲಾಯಿತು. ಎನ್‌ಸಿಸಿ ನೇವಿ ಅಧಿಕಾರಿ ಮೀನಾಕ್ಷಿ ಅವರು ಇದ್ದರು.