Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸರಕಾರದ ಯೋಜನೆಗಳನ್ನು ಅರ್ಹ ಮಹಿಳಾ ಫಲಾನುಭವಿಗಳಿಗೆ ತಲುಪಿಸಿ: ಶಶಿಕಲಾ ವಿ. ಟೆಂಗಳೆ
    ಉಡುಪಿ ಜಿಲ್ಲೆ

    ಸರಕಾರದ ಯೋಜನೆಗಳನ್ನು ಅರ್ಹ ಮಹಿಳಾ ಫಲಾನುಭವಿಗಳಿಗೆ ತಲುಪಿಸಿ: ಶಶಿಕಲಾ ವಿ. ಟೆಂಗಳೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಮಹಿಳೆಯರ ಕಲ್ಯಾಣಾಭಿವೃದ್ಧಿಗೆ ಸರಕಾರ ಅನೇಕ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳೆ ಹೇಳಿದರು.

    Click Here

    Call us

    Click Here

    ಅವರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾಜದಲ್ಲಿನ ದುರ್ಬಲ ವರ್ಗದ ಮಹಿಳೆಯರ ಅನುಕೂಲಕ್ಕೆ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಮಹಿಳೆಯರು ಸದುಪಯೋಗಪಡಿಸಿಕೊಂಡು ಸ್ವ-ಉದ್ಯೋಗ, ವಾಣಿಜ್ಯ, ಹೈನುಗಾರಿಕೆ ಸೇರಿದಂತೆ ಇನ್ನಿತರ ಚಟುವಟಿಕೆಗಳನ್ನು ಕೈಗೊಳ್ಳುವುದರೊಂದಿಗೆ ಆರ್ಥಿಕವಾಗಿ ಸಬಲರಾಗುವುದರೊಂದಿಗೆ ಸ್ವಾವಲಂಭಿಗಳಾಗಬೇಕು ಎಂದರು.

    ಜಿಲ್ಲೆಯಲ್ಲಿ ಉದ್ಯೋಗಿನಿ, ಸಮೃದ್ಧಿ, ಕಿರುಸಾಲ, ಧನಶ್ರೀ, ಚೇತನ, ಲಿಂಗತ್ವ ಅಲ್ಪಸಂಖ್ಯಾತ, ಮಹಿಳೆಯರಿಗೆ ಕೌಶಲ್ಯ ತರಬೇತಿ, ಮಹಿಳಾ ಸ್ವ-ಉದ್ಯೋಗ ಮಾರ್ಗದರ್ಶನ ಕೇಂದ್ರ ಯೋಜನೆ, ಪರಿಶಿಷ್ಟ ಜಾತಿ/ಪಂಗಡ ಉಪಯೋಜನೆಗಳನ್ನು ಪ್ರತಿಶತ ನೂರರಷ್ಟು ಅನುಷ್ಠಾನಗೊಳಿಸಬೇಕು ಎಂದರು.
    ಕೇಂದ್ರ ಹಣಕಾಸು ಸಚಿವಾಲಯ ಪ್ರಧಾನ ಮಂತ್ರಿ ಮಹಿಳಾ ಸಶಕ್ತೀಕರಣ ಯೋಜನೆಯಡಿ ಕೌಶಲ್ಯಾಭಿವೃದ್ಧಿ ಉದ್ಯೋಗ, ಆರೋಗ್ಯ ಮತ್ತು ಪೌಷ್ಠಿಕತೆಗಳ ಮೂಲಕ ಗ್ರಾಮೀಣ ಮಹಿಳೆಯರನ್ನು ಸಬಲೀಕರಣಗೊಳಿಸಲು ಒಂದೇ ಕಡೆ ಎಲ್ಲಾ ಸಹಾಯ ಸೇವೆಗಳನ್ನು ನೀಡುವ ಸಲುವಾಗಿ ಮಹಿಳಾ ಶಕ್ತಿ ಕೇಂದ್ರ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.

    ಲಿಂಗತ್ವ ಅಲ್ಪಸಂಖ್ಯಾತರಿಗೆ ಸ್ವ-ಉದ್ಯೋಗ, ಹೈನುಗಾರಿಕೆ ಕೈಗೊಳ್ಳಲು ಹಾಗೂ ಅವರಿಗೆ ನಿವೇಶನ ಒದಗಿಸುವ ಕುರಿತಂತೆ ಇಂದು ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸಿ ಸರಕಾರದ ಜಮೀನು ನೀಡಲು ಮನವಿ ಮಾಡಲಾಗಿದೆ ಎಂದರು. ಸ್ವ-ಉದ್ಯೋಗ ಕೈಗೊಳ್ಳಲು ವಾಣಿಜ್ಯ ಬ್ಯಾಂಕುಗಳ ಮೂಲಕ ಸಬ್ಸಿಡಿ ಲೋನ್ ಪಡೆದವರು ಅದನ್ನು ಸದ್ಭಳಕೆ ಮಾಡಿಕೊಳ್ಳುವುದರ ಜೊತೆಗೆ ಅದನ್ನು ನಿಗದಿತ ಕಾಲಾವಧಿ ಒಳಗೆ ಮರುಪಾವತಿ ಮಾಡಲು ಮುಂದಾದಲ್ಲಿ ವಾಣಿಜ್ಯ ಬ್ಯಾಂಕುಗಳು ಹೆಚ್ಚಿನ ನೆರವನ್ನು ನೀಡಲು ಸಾಧ್ಯ ಎಂದರು. ಎಲ್ಲಾ ಜಿಲ್ಲೆಗಳಲ್ಲೂ ಅನುಷ್ಟಾನಗೊಸಲಾದ ಯೋಜನೆಗಳಿಂದ ಉಳಿಕೆಯಾದ 12 ಕೋಟಿ ರೂ. ಹಣವನ್ನು ಮಹಿಳಾ ಅಭಿವೃದ್ಧಿ ನಿಗಮದ 24,802 ಫಲಾನುಭವಿಗಳಿಗೆ ಕೋವಿಡ್ ಸಂಕಷ್ಟದಲ್ಲಿ ತಲಾ 10,000 ರೂಗಳಂತೆ ಹಂಚಿಕೆ ಮಾಡಲಾಗಿದೆ ಎಂದರು. ಹೆಚ್.ಐ.ವಿ ಸೋಂಕಿತರ ಮಕ್ಕಳಿಗೆ ಗೌರವಯುತವಾದ ಬದುಕು ರೂಪಿಸಲು ಹೊಸ ಯೋಜನೆಗಳನ್ನು ಜಾರಿಗೆ ತರಲು ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದ್ದು, ಅದನ್ನು ಶೀಘ್ರದಲ್ಲಿಯೇ ಜಾರಿಗೆ ತರಲಾಗುವುದು ಎಂದರು.

    ಈ ಸಂದರ್ಭದಲ್ಲಿ ನಿಗಮದಿಂದ ಸಾಲ ಪಡೆದು ಸ್ವ-ಉದ್ಯೋಗವನ್ನು ಸೃಷ್ಟಿಸಿಕೊಂಡು ಯಶಸ್ವಿಯಾದ ಫಲಾನುಭವಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಯಿತು.

    Click here

    Click here

    Click here

    Click Here

    Call us

    Call us

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್ ಶೇಷಪ್ಪ, ಲೀಡ್ಬ್ಯಾಂಕ್ ಮ್ಯಾನೇಜರ್ ಸಿ ರುದ್ರೇಶ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಸುವರ್ಣ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    12 − 11 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.