ಗೋವಿಂದ ಬಾಬು ಪೂಜಾರಿ ಅವರ ಶೆಫ್‌ಟಾಕ್ ಸಂಸ್ಥೆಗೆ ಕ್ವಾಲಿಟಿ ಪುಡ್ ಕಸ್ಟಮರ್ ಸ್ಯಾಟಿಸ್ಫ್ಯಾಕ್ಷನ್ ಅವಾರ್ಡ್

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದೆಹಲಿಯಲ್ಲಿ ನಡೆದ ಇಂಟರ್ನ್ಯಾಷನಲ್ ಅಚಿವರ್ಸ್ ಕಾನ್ಫರೆಸ್ಸ್ ಸಮಾರಂಭದಲ್ಲಿ ಶೆಫ್‌ಟಾಕ್ ಸಂಸ್ಥೆಯು ಅಹಾರದ ಅತ್ಯತ್ತಮ ಗುಣಮಟ್ಟಕ್ಕೆ ಕ್ವಾಲಿಟಿ ಪುಡ್ ಕಸ್ಟಮರ್ ಸ್ಯಾಟಿಸ್ಫ್ಯಾಕ್ಷನ್ ಅವಾರ್ಡ್‌ನ್ನು ಶೆಫ್‌ಟಾಕ್ ಸಂಸ್ಥೆಯ ಎಂಡಿ ಗೋವಿಂದ ಬಾಬು ಪೂಜಾರಿ ಪಡೆದುಕೊಂಡಿದ್ದಾರೆ.

Call us

Click Here

ಪರಿಶ್ರಮದಿಂದಲೇ ಬದುಕು ಕಟ್ಟಿಕೊಂಡ ಗೋವಿಂದ ಬಾಬು ಪೂಜಾರಿ ಅವರು ಹಂತ ಹಂತವಾಗಿ ಸಾಧನೆಯ ಶಿಖರವೇರಿದವರು. ಶೆಫ್‌ಟಾಕ್ ಪುಡ್ & ಹಾಸ್ಪಿಟಾಲಿಟಿ ಸಂಸ್ಥೆಯ ಆಡಳಿತ ನಿರ್ದೇಶಕರಾಗಿರುವ ಗೋವಿಂದ ಪೂಜಾರಿ ಅವರು ಮುಂಬೈ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ತಮ್ಮ ಉದ್ಯಮವನ್ನು ವಿಸ್ತರಿಸಿ ಸಾವಿರಾರು ಮಂದಿಗೆ ಉದ್ಯೋಗ ನೀಡಿದ್ದಾರೆ.

ನಾಯಕತ್ವದ ಕೌಶಲ್ಯ ಮತ್ತು ಶ್ರಮದ ದುಡಿಮೆ ಮೂಲಕ ಯಶಸ್ಸು, ಪ್ರಸಿದ್ಧಿ ಗಳಿಸಿರುವ ಇವರು ಹುಟ್ಟೂರು ಉಪ್ಪುಂದದಲ್ಲಿ ಜನೋಪಕಾರಿ ಸಂಸ್ಥೆಯೊಂದು ಇರಬೇಕೆಂಬ ಆಶಯದಿಂದ 2015ರಲ್ಲಿ ಶ್ರೀ ವರಲಕ್ಷ್ಮೀ ಸೌಹಾರ್ದ ಸಹಕಾರಿಯನ್ನು ತೆರೆದು ಸಾರ್ವಜನಿಕರ ವಿಶ್ವಾಸಕ್ಕೆ ಪಾತ್ರರಾದರು. ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗದ ಜನರಿಗೆ ಆರೋಗ್ಯ ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಸಂಬಂಧಿಸಿದಂತೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ನೆರವಾಗುತ್ತಿದ್ದಾರೆ.

ಅವರ ಕಂಪೆನಿಗೆ ಮುಂಬೈನ ಬಿಲ್ಲವ ಚೆಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ, ಎಚ್‌ಡಿಎಫ್‌ಸಿ ಬ್ಯಾಂಕ್ ಸಹಯೋಗದೊಂದಿಗೆ ಆಯೋಜಿಸಿದ್ದ ಉದ್ಯಮ ಸಮಾವೇಶಲ್ಲಿ ‘ಉದ್ಯಮ ಶ್ರೇಷ್ಠತಾ ಪ್ರಶಸ್ತಿ’ 2016ನೇ ಸಾಲಿನಲ್ಲಿ ಆಲ್ ಇಂಡಿಯ ಅಚೀವರ್ಸ್ ಫೌಂಡೇಶನ್‌ನಿಂದ ಶೆಫ್‌ಟಾಕ್ ಹಾಗೂ ಆಡಳಿತ ನಿರ್ದೇಶಕ ಗೋವಿಂದ ಪೂಜಾರಿ ಅವರಿಗೆ ‘ನಾಯಕತ್ವ ಹಾಗೂ ಕ್ಷಿಪ್ರ ಬೆಳವಣಿಗೆಯ ಕಂಪೆನಿ’ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ.

Click here

Click here

Click here

Click Here

Call us

Call us

Leave a Reply