ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ಹೆತ್ತವರನ್ನು ಕಳೆದುಕೊಂಡ ಅವಲಂಬಿತ ಮಕ್ಕಳು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿಯು ಉಚಿತ ಶಿಕ್ಷಣವನ್ನು ನೀಡುವುದು ಎಂದು ಕಾಲೇಜಿನ ಆಡಳಿತ ತಿಳಿಸಿದೆ.
ಪ್ರಸ್ತುತ ವರ್ಷ ಅಂತಹ ವಿದ್ಯಾರ್ಥಿಗಳ ಶೈಕ್ಷಣಿಕವಾಗಿ ಸಾಮರ್ಥ್ಯದ ಬೆಳವಣಿಗೆಯ ದೃಷ್ಟಿಯಿಂದ ಈ ಆರ್ಥಿಕ ಸಹಾಯವು ಅನುಕೂಲವಾಗಲಿದೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದೆ.