ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ವೈದ್ಯರ ದಿನದ ಅಂಗವಾಗಿ ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ ಅವರನ್ನು ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ಸನ್ಮಾನಿಸಿ ಅಭಿನಂದಿಸಲಾಯಿತು.
ಗಂಗೊಳ್ಳಿ ರೋಟರಿ ಕ್ಲಬ್‌ನ ನಿಯೋಜಿತ ಅಧ್ಯಕ್ಷ ರಾಜೇಶ ಎಂ.ಜಿ., ನಿಕಟಪೂರ್ವ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ, ಸದಸ್ಯರಾದ ಕೆ.ರಾಮನಾಥ ನಾಯಕ್, ವಾಸುದೇವ ಶೇರುಗಾರ್, ಜನಾರ್ದನ ಪೂಜಾರಿ ಪೆರಾಜೆ, ಪ್ರೇಮಾ ಸಿ.ಪೂಜಾರಿ, ಫಿಲೋಮಿನಾ ಫೆರ್ನಾಂಡಿಸ್, ಚಂದ್ರಕಲಾ, ಗೋಪಾಲ ಪೂಜಾರಿ, ಜಯಂತಿ ಶೇರುಗಾರ್, ಆಸ್ಪತ್ರೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.