Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ರಾಷ್ಟ್ರಮಟ್ಟದಲ್ಲಿ 147ನೇ ಸ್ಥಾನ
    alvas nudisiri

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ರಾಷ್ಟ್ರಮಟ್ಟದಲ್ಲಿ 147ನೇ ಸ್ಥಾನ

    Updated:02/07/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದರೆ: ಟೈಮ್ಸ್ ಆಫ್ ಇಂಡಿಯಾ ನಡೆಸಿದ 2021ರ ಟೈಮ್ಸ್ ಇಂಜಿನಿಯರಿಂಗ್ ಇನ್ಸ್‌ಟಿಟ್ಯೂಟ್ ರ‍್ಯಾಂಕಿಂಗ್ ಸರ್ವೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ರಾಷ್ಟ್ರಮಟ್ಟದಲ್ಲಿ 147ನೇ ರ‍್ಯಾಂಕ್ ಪಡೆದಿದೆ. ರಾಷ್ಟ್ರಮಟ್ಟದಲ್ಲಿ ನಡೆದ ಈ ಪ್ರತಿಷ್ಠಿತ ಸಮೀಕ್ಷೆಯಲ್ಲಿ ಎಐಇಟಿ ಈ ಅತ್ಯುನ್ನತ ಸ್ಥಾನ ಪಡೆದಿದೆ. ಸಂಶೋಧನೆ ಮತ್ತು ಕೌಶಲ್ಯಾಭಿವೃದ್ಧಿ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅದ್ಭುತ ಸಾಧ್ಯತೆಗಳನ್ನು ಒದಗಿಸುತ್ತಿರುವ ಈ ಭಾಗದ ಪ್ರತಿಷ್ಠಿತ ಕಾಲೇಜುಗಳಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಒಂದಾಗಿದೆ.

    Click Here

    Call us

    Click Here

    ದೇಶದ ಅತ್ಯುತ್ತಮ ಇಂಜಿನಿಯರಿಂಗ್ ಕಾಲೇಜುಗಳನ್ನು ಗುರುತಿಸಿ ರ‍್ಯಾಂಕಿಂಗ್ ನೀಡುವುದು ಈ ಸಮೀಕ್ಷೆಯ ಆಶಯ. ಕಾಲೇಜಿನ ಮೂಲಸೌಕರ‍್ಯ, ಕುಶಲ ಉಪನ್ಯಾಸಕ ವೃಂದ, ಪಠ್ಯಕ್ರಮ, ಔದ್ಯೋಗಿಕ ಕ್ಷೇತ್ರದೊಡನೆಯ ಸಂಬಂಧ, ಬೋಧನ ಕ್ರಮ, ಸಂಶೋಧನೆಯ ವೈವಿಧ್ಯಮಯ ಸಾಧ್ಯತೆಗಳು, ಜಾಗತಿಕ ಮಟ್ಟದ ಅವಕಾಶಗಳು, ಉದ್ಯೋಗಾವಕಾಶಗಳು ಮತ್ತು ಕಾಲೇಜಿನ ಒಟ್ಟು ಬ್ರ್ಯಾಂಡ್ ಮೌಲ್ಯ ಈ ಸಮೀಕ್ಷೆಯ ವಿವಿಧ ಮಾನದಂಡಗಳಾಗಿದ್ದವು. ಈ ಮಾನದಂಡಗಳ ಆಧಾರದ ಮೇಲೆ ಅತ್ಯುತ್ತಮ ಕಾಲೇಜಿನ ಸೂಚ್ಯಂಕವನ್ನು ನೀಡಲಾಗಿದೆ.

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು
    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಉತ್ಕೃಷ್ಟ ಗುಣಮಟ್ಟದ ಸಂಶೋಧನಾ ವಿಭಾಗವನ್ನು ಹೊಂದಿದ್ದು, ಕೆಸಿಟಿಯು ಮತ್ತು ವಿಜಿಎಸ್‌ಟಿಯಿಂದ ನಾಲ್ಕು ಕೋಟಿ ರೂ. ಗಿಂತಲೂ ಅಧಿಕ ರಿಸರ್ಚ್ ಗ್ರ್ಯಾಂಟ್ ಪಡೆದುಕೊಂಡಿದೆ. ಕಾಲೇಜಿನಲ್ಲಿ ಪಿಎಚ್‌ಡಿ ಪದವಿ ಪಡೆದ ೩೫ ಉಪನ್ಯಾಸಕರಿದ್ದು, ವಿದ್ಯಾರ್ಥಿಗಳಿಗೆ ಸಂಶೋಧನಾ ಕ್ಷೇತ್ರದಲ್ಲಿ ನಿರಂತರ ಮಾರ್ಗದರ್ಶನ ನೀಡಲಾಗುತ್ತಿದೆ. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಡಿಯಲ್ಲಿ ೭ ಸಂಶೋಧನಾ ವಿಭಾಗಗಳಿದ್ದು, ಪ್ರತಿವರ್ಷವೂ ೩೫೦ಕ್ಕೂ ಹೆಚ್ಚು ಸಂಶೋಧನೆಗಳನ್ನು ಪ್ರತಿಷ್ಠಿತ ಜರ್ನಲ್‌ಗಳಲ್ಲಿ ಪ್ರಕಟಿಸಲಾಗಿದೆ.

    ಇಸ್ರೋ, ಐಐಐಟಿ ಅಲಹಾಬಾದ್, ಎಸ್‌ಸಿಎಲ್ ಚಂಡೀಘರ್, ಡಿಐಎಟಿ ಪುಣೆ ಸೇರಿದಂತೆ ೪೨ಕ್ಕೂ ಹೆಚ್ಚು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಸಂಸ್ಥೆಗಳೊಡನೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಶೈಕ್ಷಣಿಕ ಒಡಂಬಡಿಕೆಗಳನ್ನು ಹೊಂದಿದೆ. ವಿದ್ಯಾರ್ಥಿಗಳ ಇಂಟರ್ನ್‌ಶಿಪ್, ಪ್ರೊಜೆಕ್ಟ್ ವರ್ಕ್, ಸಂಶೋಧನಾ ಚಟುವಟಿಕೆಗಳು ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಈ ಒಡಂಬಡಿಕೆಗಳು ಪೂರಕವಾಗಿವೆ. ಕಾಲೇಜಿನ ವಿದ್ಯಾರ್ಥಿಗಳು 7 ಪೇಟೆಂಟ್‌ಗಳನ್ನು ಪಡೆದಿದ್ದು, 2020ರ ವರ್ಷದಲ್ಲಿ ಕೈಗೊಂಡ 10 ಪೇಟೆಂಟ್‌ಗಳ ಸಂಶೋಧನಾ ಕಾರ‍್ಯ ಪ್ರಗತಿಯಲ್ಲಿದೆ. ಎಐಇಟಿ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸೆಲೆಕ್ಷನ್‌ನ ಅದ್ಭುತ ಸಾಧ್ಯತೆಗಳನ್ನು ತೆರೆದಿಟ್ಟಿದೆ. ಕೊರೊನಾದಂತಹ ಸವಾಲಿನ ಪರಿಸ್ಥಿಯ ಮಧ್ಯೆಯೂ 163ಕ್ಕೂ ಹೆಚ್ಚು ಕಂಪನಿಗಳನ್ನು ಕ್ಯಾಂಪಸ್‌ಗೆ ತರಲಾಗಿದ್ದು, 314 ವಿದ್ಯಾರ್ಥಿಗಳು ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗಾವಕಾಶ ಪಡೆದಿದ್ದಾರೆ.

    ಎಲ್ಲಾ ಇಂಜಿನಿಯರಿಂಗ್ ಕೋರ್ಸ್‌ಗಳ ಶುಲ್ಕವು ಕಡಿಮೆಯಿದ್ದು, ಎಲ್ಲಾ ಆರ್ಥಿಕ ಸ್ತರಗಳ ವಿದ್ಯಾರ್ಥಿಗಳ ಕೈಗೆಟಕುವಂತಿದೆ. ಈ ಮೂಲಕ ಇಂಜಿನಿಯರಿಂಗ್ ಕನಸು ಕಾಣುವ ಪ್ರತಿಯೊಬ್ಬ ವಿದ್ಯಾರ್ಥಿಯ ಕನಸನ್ನು ನನಸಾಗಿಸಲು ಎಐಇಟಿ ಶ್ರಮಿಸುತ್ತಿದೆ.

    Click here

    Click here

    Click here

    Click Here

    Call us

    Call us

    ಇಂಜಿನಿಯರಿಂಗ್ ಕೋರ್ಸಿನ ಅಕ್ಯಾಡೆಮಿಕ್ಸ್‌ಗೆ ಪೂರಕವಾಗಿ ೪೦ ವಿದ್ಯಾರ್ಥಿ ಫೋರಂಗಳನ್ನು ರೂಪಿಸಲಾಗಿದೆ. ಎನ್‌ಸಿಸಿ, ಎನ್‌ಎಸ್‌ಎಸ್, ಎಸ್‌ಎಸ್‌ಬಿ, ಚಿರ್ಪ್-ಬರ್ಡ್ ಕ್ಲಬ್, ಸೃಷ್ಟಿ-ನೇಚರ್ ಕ್ಲಬ್, ರೋಸ್ಟ್ರಮ್-ಸ್ಪೀಕರ‍್ಸ್ ಕ್ಲಬ್ ಹೀಗೆ ವಿಭಿನ್ನ ಫೋರಂಗಳಿದ್ದು, ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಿಗೆ ಪೂರಕವಾಗಿವೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    30/04/2026
    Leave A Reply Cancel Reply

    eighteen − two =

    Call us

    Click Here

    Call us

    Call us

    Call us
    Highest Viewed Recently
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.