Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅನ್ಲಾಕ್ 3.0 ಘೋಷಣೆ: ಸಭೆ ಸಮಾರಂಭಕ್ಕೆ ಅವಕಾಶವಿಲ್ಲ, ವೀಕೆಂಡ್ ಕರ್ಫ್ಯೂ ಇರಲ್ಲ, ದೇವಸ್ಥಾನ ತೆರೆಯಲು ಅವಕಾಶ
    ಉಡುಪಿ ಜಿಲ್ಲೆ

    ಅನ್ಲಾಕ್ 3.0 ಘೋಷಣೆ: ಸಭೆ ಸಮಾರಂಭಕ್ಕೆ ಅವಕಾಶವಿಲ್ಲ, ವೀಕೆಂಡ್ ಕರ್ಫ್ಯೂ ಇರಲ್ಲ, ದೇವಸ್ಥಾನ ತೆರೆಯಲು ಅವಕಾಶ

    Updated:03/07/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು: ಜುಲೈ 5ರಿಂದ ರಿಂದ 19ರವರೆಗೆ ಜಾರಿಯಲ್ಲಿರುವಂತೆ ಅನ್’ಲಾಕ್ 3.0 ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮೂರನೇ ಅನ್ ಲಾಕ್ ಘೋಷಣೆ ಮಾಡಿದರು. ಸರ್ಕಾರಿ, ಖಾಸಗಿ, ಕೈಗಾರಿಕೆ, ವಾಣಿಜ್ಯ ಚಟುವಟಿಕೆಗಳು, ಮಾಲ್ ಗಳಿಗೆ ಅನುಮತಿ, ಮೆಟ್ರೋ, ಕಾರ್ಮಿಕ ಕಾರ್ಯಗಳಿಗೆ ಅವಕಾಶ ನೀಡಲಾಗಿದೆ ಎಂದರು.

    Click Here

    Call us

    Click Here

    ಯಾವುದಕ್ಕೆಲ್ಲ ವಿನಾಯಿತಿ ನೀಡಲಾಗಿದೆ?
    1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
    2. ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
    3. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ.100ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.
    4. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.
    5. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.
    6. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
    7. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
    8. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.
    9. ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
    10. ವಾರಾಂತ್ಯ ಕರ್ಫ್ಯೂ ರದ್ದಾಗಿದೆ.
    11. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.
    12. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.
    13. ಪಬ್ ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
    14. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.

    ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ.

    ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ಸಿಎಂ ವಿನಂತಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026
    Leave A Reply Cancel Reply

    19 − 13 =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.