Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರವಂತೆ ಗ್ರಾ.ಪಂ: ಸದಸ್ಯರಿಗೆ ಶಿಕ್ಷಣ ಕಾರ್ಯಪಡೆ ತರಬೇತಿ
    ಊರ್ಮನೆ ಸಮಾಚಾರ

    ಮರವಂತೆ ಗ್ರಾ.ಪಂ: ಸದಸ್ಯರಿಗೆ ಶಿಕ್ಷಣ ಕಾರ್ಯಪಡೆ ತರಬೇತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಗ್ರಾಮ ಸರ್ಕಾರವಾದ ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ನಾಗರಿಕ ಸೌಲಭ್ಯಗಳ ಸೃಷ್ಟಿಗಷ್ಟೇ ತಮ್ಮನ್ನು ಸೀಮಿತಗೊಳಿಸಿಕೊಳ್ಳದೆ, ಸಮಗ್ರ ಅಭಿವೃದ್ಧಿಯ ಗುರಿ ಸಾಧಿಸಬೇಕು. ತಮ್ಮ ಕಾರ್ಯಸೂಚಿಯಲ್ಲಿ ಮಹಿಳೆಯರ, ಮಕ್ಕಳ ಮತ್ತು ಹಿರಿಯ ನಾಗರಿಕರ ರಕ್ಷಣೆ ಹಾಗೂ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್ ಹೇಳಿದರು.

    Click Here

    Call us

    Click Here

    ಅವರು ಇಲಾಖೆಯಿಂದ ಯೂಟ್ಯೂಬ್ ಮೂಲಕ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಶಿಕ್ಷಣ ಕಾರ್ಯಪಡೆಗಳ ಸದಸ್ಯರ ಒಂದು ದಿನದ ರಾಜ್ಯವ್ಯಾಪಿ ತರಬೇತಿಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

    ದೇಶ ಇಂದು ಸ್ವಾತಂತ್ರ್ಯದ 75ನೇ ವರ್ಷಾಚರಣೆ ಮಾಡುತ್ತಿರುವಾಗ ಗಾಂಧೀಜಿಯವರ ಗ್ರಾಮ ಸ್ವರಾಜ್ ಕನಸು ನನಸು ಮಾಡುವ ಹೊಣೆ ನಮ್ಮ ಮೇಲಿದೆ. ಅದೇ ವೇಳೆ ಕೋವಿಡ್ ಸೋಂಕಿನ ಕಾರಣ ಮಕ್ಕಳು, ಮಹಿಳೆಯರು, ಹಿರಿಯರು ವಿವಿಧ ಸಂಕಷ್ಟ ಎದುರಿಸುತ್ತಿದ್ದಾರೆ. ಶಾಲೆ ತ್ಯಜಿಸಿದ ಮಕ್ಕಳನ್ನು ಶಾಲೆಗೆ ತರುವ, ಮಹಿಳೆಯರ ವಿರುದ್ಧ ನಡೆಯುವ ದೌರ್ಜನ್ಯಗಳನ್ನು ತಡೆಯುವ, ಹಿರಿಯ ನಾಗರಿಕರಿಗೆ ಸಾಂತ್ವನ ನೀಡುವ ಕೆಲಸದಲ್ಲಿ ಗ್ರಾಮ ಪಂಚಾಯಿತಿಗಳು ಸಕ್ರಿಯವಾಗಿ ತೊಡಗಬೇಕು. ಪರಿಣತರು ಇವುಗಳಿಗೆ ಸಂಬಂಧಿಸಿದ ವಿಷಯಗಳನ್ನು ಇಂದಿನ ತರಬೇತಿಯಲ್ಲಿ ತಿಳಿಸಿಕೊಡುತ್ತಾರೆ. ಅವುಗಳನ್ನು ಚಾಚೂ ತಪ್ಪದೆ ಆಚರಣೆಗೆ ತನ್ನಿ ಎಂದು ಅವರು ಸೂಚಿಸಿದರು.

    ತರಬೇತಿಯ ಅವಧಿಯಲ್ಲಿ ಬಾಲ ಕಾರ್ಮಿಕ ಪದ್ಧತಿ ತಡೆಗಟ್ಟುವ ಕುರಿತು ಇಂಟರ್‌ನ್ಯಾಶನಲ್ ಜಸ್ಟೀಸ್ ಮಿಶನ್ ಸದಸ್ಯ ವಿಲಿಯಂ ಕ್ರಿಸ್ಟೂಫರ್, ಬಾಲ್ಯ ವಿವಾಹ ತಡೆ ಕುರಿತು ಬೆಂಗಳೂರಿನ ಚೈಲ್ಡ್ ರೈಟ್ಸ್ ಟ್ರಸ್ಟ್‌ನ ವಿಷಯ ತಜ್ಞ ವಾಸುದೇವ ಶರ್ಮ, ಮಕ್ಕಳ ದತ್ತಾಂಶ ಕ್ರೋಢೀಕರಿಸುವ ಬಗೆಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಹಿರಿಯ ನಾಗರಿಕರ ಆರೋಗ್ಯ ಮತ್ತು ಸಾಮಾಜಿಕ ಸಮಸ್ಯೆ ನಿರ್ವಹಣೆ ಬಗೆಗೆ ಬೆಂಗಳೂರಿನ ಮನ:ಶಾಸ್ತ್ರಜ್ಞೆ ಡಾ. ಇಂದಿರಾ ಜೈಪ್ರಕಾಶ್, ಮಾನಸಿಕ ಆರೋಗ್ಯ ನಿರ್ವಹಣೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಉಪ ನಿರ್ದೇಶಕಿ ಡಾ. ರಜನಿ ಪಾರ್ಥಸಾರಥಿ, ಬಾಲನ್ಯಾಯ ಕಾಯಿದೆ ಹಾಗೂ ಮಕ್ಕಳ ರಕ್ಷಣೆ ವಿಚಾರವಾಗಿ ಸಮಗ್ರ ಶಿಶು ರಕ್ಷಣಾ ಯೋಜನೆಯ ನಿರ್ದೇಶಕಿ ಪಲ್ಲವಿ ಅಕುರಾತಿ, ಕೌಟುಂಬಿಕ ದೌರ್ಜನ್ಯ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ರಕ್ಷಣಾಧಿಕಾರಿ ಲತಾ ಕೆ. ಎಚ್ ಮಾಹಿತಿ ನೀಡಿದರು. ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭೂಬಾಲನ್ ಟಿ. ಬಾಲ್ಯ ವಿವಾಹ ತಡೆಗಟ್ಟುವ ವಿಚಾರದಲ್ಲಿ ತಮ್ಮ ಅನುಭವ ವಿವರಿಸಿದರು.

    ಮೈಸೂರಿನ ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ನಿರ್ದೇಶಕಿ ಕೆ. ಎಂ. ಗಾಯತ್ರಿ ಸ್ವಾಗತಿಸಿದರು. ಸಂಶೋಧನಾಧಿಕಾರಿ ದೀಪಾ ಎನ್ ನಿರ್ವಹಿಸಿದರು. ಬೈಂದೂರು ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿ ಶಿಕ್ಷಣ ಕಾರ್ಯಪಡೆ ಸದಸ್ಯರು ತಮ್ಮತಮ್ಮ ಪಂಚಾಯಿತಿಗಳಲ್ಲಿ ತರಬೇತಿ ಪಡೆದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆಯ ಶೌರ್ಯ ತಂಡದಿಂದ ಮಳೆ ಹಾನಿ ಪ್ರದೇಶದಲ್ಲಿ ಸೇವಾ ಕಾರ್ಯ

    08/07/2026

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಖೋ ಖೋ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    08/07/2026

    ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ವಿಶಿಷ್ಟ ಶ್ರೇಣಿಯ ಸಾಧಕರಿಗೆ ಸನ್ಮಾನ

    08/07/2026
    Leave A Reply Cancel Reply

    three + five =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆಯ ಶೌರ್ಯ ತಂಡದಿಂದ ಮಳೆ ಹಾನಿ ಪ್ರದೇಶದಲ್ಲಿ ಸೇವಾ ಕಾರ್ಯ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಖೋ ಖೋ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ವಿಶಿಷ್ಟ ಶ್ರೇಣಿಯ ಸಾಧಕರಿಗೆ ಸನ್ಮಾನ
    • ಸಿ.ಎ. ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.