ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಜು.6: ತಾಲೂಕಿನ ಬಸ್ರೂರು ಮೂಡ್ಕೇರಿ ಕೋಟಿಚೆನ್ನಯ್ಯ ಪಂಜುರ್ಲಿ ಗರಡಿಗೆ ಮಂಗಳವಾರ ಸಂಜೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ. ಕೆ.ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭ ಕುಂದಾಪುರ ಬಿಲ್ಲವ ಸಂಘದಿಂದ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಆ ಬಳಿಕ ಅವರು ಯಡಮೊಗೆಯಲ್ಲಿ ಕೊಲೆಯಾದ ಉದಯ ಗಾಣಿಗ ಅವರ ನಿವಾಸಕ್ಕೆ ತೆರಳಿ ಕುಟುಂಬಿಕರಿಗೆ ಸಾಂತ್ವಾನ ಹೇಳಿದರು.
ಈ ಸಂದರ್ಭ ಕೆಪಿಸಿಸಿ ಕಾರ್ಯಧ್ಯಕ್ಷ ದ್ರುವ ನಾರಾಯಣ, ಮಾಜಿ ಸಚೊವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಎಐಸಿಸಿ ಸದಸ್ಯ ಪಿ.ವಿ ಮೋಹನ್, ಬಸ್ರೂರು ಮೂಡ್ಕೇರಿ ಗರಡಿ ಆಡಳಿತ ವ್ಯವಸ್ಥಾಪಕ ಬಿ. ಗೋಪಾಲ ಪೂಜಾರಿ, ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಜಿ.ಪಂ ಸದಸ್ಯೆ ಗೌರಿ ದೇವಾಡಿಗ, ಜಿಲ್ಲಾ ಕಾಂಗ್ರೆಸ್ ಪ್ರಮುಖರಾದ ಎಸ್. ರಾಜು ಪೂಜಾರಿ, ಮದನ್ ಕುಮಾರ್, ಮಲ್ಯಾಡಿ ಶಿವರಾಮ ಶೆಟ್ಟಿ, ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘಧ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ, ಟ್ರಸ್ಟ್ ಕಾರ್ಯದರ್ಶಿ ಭಾಸ್ಕರ ವಿಠಲವಾಡಿ, ನಾರಾಯಣಗುರು ಯುವಕ ಮಂಡಲದ ಅಧ್ಯಕ್ಷ ಶ್ರೀಕಾಂತ್ ಕಡ್ಗಿಮನೆ, ಸಂಘದ ಕಾರ್ಯದರ್ಶಿ ಗಣೇಶ ವಿಠಲವಾಡಿ, ಸ್ಥಳೀಯ ಸಂಘದ ಅಧ್ಯಕ್ಷ ಜಯಸೂರ್ಯ ಪೂಜಾರಿ, ಮಾಜಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಾಣಿಗೋಪಾಲ್, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ ಶೆಟ್ಟಿ ಕಾನ್ಮಕ್ಕಿ, ದೇವಾನಂದ ಶೆಟ್ಟಿ, ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ವಿಕಾಸ್ ಹೆಗ್ಡೆ, ಮಾಜಿ ತಾ.ಪಂ ಸದಸ್ಯೆ ಜಾನಕಿ ಬಿಲ್ಲವ, ಸುರೇಶ್ ಚಾತ್ರಬೆಟ್ಟು, ದೇವಕಿ ಸಣ್ಣಯ್ಯ ಇದ್ದರು.