ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ಆರೆಸೆಸ್ಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಪತ್ನಿ ಡಾ. ಕಮಲ ಪ್ರಭಾಕರ್ ಭಟ್ ಅವರು ಭೇಟಿ ನೀಡಿ ವೀಕ್ಷಿಸಿದರು. ಕೆರೆಯ ಮಧ್ಯದ ಕಾರಂತರ ಕಂಚಿನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರಂಗಮಂದಿರ, ಆರ್ಟ್ ಗ್ಯಾಲರಿ, ಮಿನಿ ಸಭಾಂಗಣ, ಗ್ರಂಥಾಲಯ ವೀಕ್ಷಿಸಿದರು. ಕಾರಂತ ಥೀಮ್ ನಲ್ಲಿ ನಡೆಯುವ ಕಾರ್ಯಕ್ರಮ , ಚಟುವಟಿಗೆ ಬಗ್ಗೆ ಮಾಹಿತಿ ಪಡೆದುಕೊಂಡರು. ನೂತನವಾಗಿ ನಿರ್ಮಾಣವಾಗುತ್ತಿರುವ ಸಂಗೀತ ಕಾರಂಜಿಯ ರೂಪುರೇಷೆ ಬಗ್ಗೆ ಚರ್ಚಿಸಿದರು. ಥೀಮ್ ಪಾರ್ಕ್ ಅಭಿವೃದ್ಧಿಗೊಳ್ಳುತ್ತಿರುವುದು ಸಂತಸದ ವಿಷಯ ಇನ್ನಷ್ಟೂ ಅಭಿವೃದ್ಧಿ ಜೊತೆಗೆ ಚಟುವಟಿಕೆ ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ದ.ಕ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಬ್ರಾಯ್ ಆಚಾರ್ಯ, ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ, ಕೊಲ್ಲೂರು ವ್ಯವಸ್ಥಾಪನ ಸಮಿತಿ ಸದಸ್ಯ ಕೆ.ಪಿ ಶೇಖರ್, ರಾಜ್ಯ ಬಿ.ಜೆ.ಪಿ ಹಿಂದುಳಿದ ವರ್ಗದ ಮೊರ್ಚದ ಕಾರ್ಯದರ್ಶಿ ವಿಠಲ್ ಪೂಜಾರಿ, ಪಂಚಾಯತ್ ಸದಸ್ಯರಾದ ವಿದ್ಯಾ ಸಾಲಿಯಾನ್, ಚಂದ್ರ ಪೂಜಾರಿ ಕದ್ರಿಕಟ್ಟು, ಸಂತೋಷ್ ಪ್ರಭು, ಸ್ಥಳೀಯರಾದ ಯೊಗೀಶ್ ಮರಕಾಲ, ಥೀಮ್ ಪಾರ್ಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.