ಮೂಡ್ಲಕಟ್ಟೆ ಎಂಐಟಿ: ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಹೊಸ ಇಂಜಿನಿಯರಿಂಗ್ ಕೋರ್ಸ್ ಆರಂಭ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಧುನಿಕ ತಂತ್ರಜ್ಞಾನ ಭರಿತ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಮಷೀನ್ ಲರ್ನಿಂಗ್ ತಂತ್ರಜ್ಞಾನ ದ ಹೊಸ ಕೋರ್ಸ್ ಅನ್ನು ಪ್ರಾರಂಭಿಸಲು ಅನುಮೋದನೆ ದೊರಕಿದ್ದು, ಇದೇ ಸಾಲಿನಲ್ಲಿ ಪ್ರವೇಶ ಪಡೆಯಲು ಅವಕಾಶವಿರುತ್ತದೆ.

Call us

Click Here

ಆಧುನಿಕ ಯುಗದಲ್ಲಿ ಇಂಜಿನಿಯರಿಂಗ್ ಒಳಗೊಳ್ಳುವಿಕೆ ಇಲ್ಲದೆ ಇರುವುದನ್ನು ಊಹಿಸಲೇ ಕಷ್ಟವಾಗಿದ್ದು, ಸ್ವಯಂಚಾಲಿತವಾಗಿ ಕಾರ್ಯ ನಿರ್ವಹಿಸುವ ಉತ್ಪನ್ನಗಳಿಗೆ ಬಹಳ ಬೇಡಿಕೆ ಇರುವುದರಿಂದ ಕೃತಕ ಬುದ್ದಿಶಕ್ತಿ ತಂತ್ರಜ್ಞಾನ ಕಲಿಕೆ ಪ್ರಮುಖ ಪಾತ್ರವಹಿಸುತ್ತದೆ. ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್ ಕಂಮ್ಯುನಿಕೇಷನ್ಸ್, ಸಿವಿಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಕೋರ್ಸ್ ಗಳು ಈಗಾಗಲೇ ಕಾರ್ಯ ನಿರ್ವಹಿಸುತ್ತಿದ್ದು, ಈಗ ಹೊಸ ಕೋರ್ಸ್ನ ಸೇರ್ಪಡೆಯಿಂದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ಸಿಕ್ಕಂತಾಗಿದೆ.

ವಿದ್ಯಾರ್ಥಿಗಳಿಗೆ ಕಂಪನಿಯಲ್ಲಿ ಉದ್ಯೋಗವಕಾಶಕ್ಕೆ ಅನುಕೂಲವಾಗುವ ಸಲುವಾಗಿ ಕಾಲೇಜು ಈಗಾಗಲೇ ಮೈಕ್ರೋಸಾಫ್ಟ್ನ ಟ್ರೈನಿಂಗ್ ಪಾರ್ಟ್ನರ್ ಮತ್ತು ಎಡೆಕ್ಸ್ ಕಂಪನಿಗಳ ಜೊತೆ ಒಪ್ಪಂದ ಮಾಡಿ ಕೊಂಡಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಕೂಡ ಪಡೆಯಲು ಅವಕಾಶ ಇರುತ್ತದೆ.

2020-2021 ಸಾಲಿನಲ್ಲಿ ಎಲ್ಲಾ ಅರ್ಹ ವಿದ್ಯಾರ್ಥಿಗಳು ಉದ್ಯೋಗ ಮೇಳ ಮತ್ತು ಕ್ಯಾಂಪಸ್ ಸಂದರ್ಶನದ ಮೂಲಕ ಉದ್ಯೋಗ ಪಡೆದದ್ದು ಈ ಕಾಲೇಜಿನ ಗಮನಾರ್ಹ ವಿಷಯವಾಗಿದೆ.

Leave a Reply