ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೈಂದೂರು ತಾಲೂಕಿನ ಮುಲ್ಲಿಬಾರು ಸ.ಹಿ.ಪ್ರಾ ಶಾಲೆಯ ವಿದ್ಯಾರ್ಥಿನಿ ಸುಚಿತ್ರಾ ಪರಮೇಶ್ವರ ಮರಾಠಿ ನ್ಯಾಶನಲ್ ಮಿನ್ಸ್ ಕಮ್ ಮೆರೀಟ್ ಸ್ಕಾಲರ್‌ಶಿಪ್ ಪರೀಕ್ಷೆಯಲ್ಲಿ (NMMS)ಯಲ್ಲಿ ತೇರ್ಗಡೆಯಾಗಿದ್ದಾಳೆ.
ಬೈಂದೂರು ವಲಯದ ಸುಮಾರು ಮೂರು ಸಾವಿರ ವಿದ್ಯಾರ್ಥಿಗಳ ಪೈಕಿ 11 ಮಂದಿ ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿನಿಯನ್ನು ಆಕೆಯ ನಿವಾಸದಲ್ಲಿ ಗೌರವಿಸಲಾಯಿತು. ಈ ಸಂದರ್ಭ ಮುಲ್ಲಿಬಾರು ಶಾಲೆಯ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದ, ಎಸ್‌ಡಿಎಂಸಿ ಅಧ್ಯಕ್ಷರು, ಸಂಚಲನದ ಪದಾಧಿಕಾರಿಗಳು, ಕಂಬದಕೋಣೆ ಕ್ಲಸ್ಟರ್ ಸಿಆರ್‌ಪಿ, ಕ್ಯಾಕೋಡ್ ಶಾಲೆಯ ಮುಖ್ಯ ಶಿಕ್ಷಕರು ಮೊದಲಾದವರು.