ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗೆ ಸಂದರ್ಶನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ವಿವಿಧ ಅರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಯನ್ನು ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶದವರೆಗೆ ಮಾಸಿಕ 15,000 ರೂ, ವೇತನದಂತೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು, ಜುಲೈ 13 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

Call us

Click Here

ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ತರಬೇತಿ ಹೊಂದಿ, ರಾಜ್ಯ ನರ್ಸಿಂಗ್ ಕೌನ್ಸಿಲ್ನಲ್ಲಿ ನೋಂದಣಿ ಆದಂತಹ ಅಭ್ಯರ್ಥಿಗಳು ವಿದ್ಯಾರ್ಹತೆಯ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ 0820-2536650/ 2525566 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply