ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸೇವಾ ಭಾರತಿ ಕರ್ನಾಟಕ, ಪ್ರೇರಣಾ ಟ್ರಸ್ಟ್ ಶಿವಮೊಗ್ಗ, ಪಿಇಎಸ್ ಶಿವಮೊಗ್ಗ ಹಾಗೂ ಉಡುಪಿ ಆರೋಗ್ಯ ಇಲಾಖೆ ಇವರ ಸಹಯೋಗದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿರುವ ಎಂಡೋಸಲ್ಪಾನ್ ಸಂತ್ರಸ್ತ ಕುಟುಂಬದವರಿಗೆ ಉಚಿತ ಕೋವೀಡ್ ಲಸಿಕೆ ನೀಡುವ ಅಭಿಯಾನ ಜೂ.12ರಂದು ಬೆಳಿಗ್ಗೆ 9 ಘಂಟೆಗೆ ತಾಲೂಕಿನ ಶಿರೂರು ವೆಂಕಟರಮಣ ಸಭಾಭವನದಲ್ಲಿ ಆರಂಭಗೊಳ್ಳಲಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರ ಸಂಸದರಾದ ಬಿ. ವೈ ರಾಘವೇಂದ್ರ ಹಾಗೂ ಬೈಂದೂರು ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರ ಸಹಭಾಗಿತ್ವದಲ್ಲಿ ಸುಮಾರು 3,000 ಕೋವೀಡ್ ಲಸಿಕೆಯನ್ನು ಉಚಿತವಾಗಿ ನೀಡಲಿದ್ದು, ಆಯಾ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಎಂಡೋಸಲ್ಪಾನ್ ಸಂತ್ರಸ್ತ ಕುಟುಂಬಿಕರಿಗೆ ಪ್ರತ್ಯೇಕವಾಗಿ ನೀಡಲಾಗುತ್ತಿದೆ. ಎಂಡೋಸಲ್ಪಾನ್ ಸಂತ್ರಸ್ತ ಕುಟುಂಬದವರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.