ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಸರಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘ ಉಡುಪಿ ಇವರ ವತಿಯಿಂದ ಉಡುಪಿಯ ಜಿಲ್ಲಾ ಆಯುಷ್ ಕಛೇರಿಯಲ್ಲಿ ವೈದ್ಯರ ದಿನಾಚರಣೆ ಕಾರ್ಯಕ್ರಮ ಜರಗಿತು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ಪ್ರಕಾಶ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಕರ್ನಾಟಕ ಸರಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ.ವೀಣಾ ಕಾರಂತ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಎಸ್‌ಡಿಎಂ ಆಯುರ್ವೇದ ಕಾಲೇಜಿನ ಸ್ನಾತಕೋತ್ತರ ವಿಭಾಗದ ಡೀನ್ ಡಾ.ನಿರಂಜನ್ ರಾವ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯದರ್ಶಿ ಡಾ.ಸಂಧ್ಯಾ ಸ್ವಾಗತಿಸಿದರು. ಖಜಾಂಚಿ ಡಾ.ಪೂರ್ಣಿಮಾ ಕಾರ್ಯಕ್ರಮ ನಿರ್ವಹಿಸಿದರು. ಡಾ.ಪ್ರದೀಪ ವಂದಿಸಿದರು.