ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹೆಮ್ಮಾಡಿ ಪಂಚಗಂಗಾ ರೈತರ ಸೇವಾ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷ ನೂಜಾಡಿ ದಿ. ಅಶೋಕ್ ಕುಮಾರ್ ಶೆಟ್ಟಿ ಸ್ಮರಣಾರ್ಥ ನೂಜಾಡಿಯಲ್ಲಿ ನಿರ್ಮಿಸಿದ ಬಸ್ ನಿಲ್ದಾಣ ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಉದ್ಘಾಟಿಸಿದರು.
ದಿ. ಅಶೋಕ್ ಕುಮಾರ್ ಶೆಟ್ಟಿ ಪತ್ನಿ, ಪುತ್ರ ಮತ್ತು ನೂಜಾಡಿ ಭವಾನಿ ಸೂರಪ್ಪ ಶೆಟ್ಟಿ ಕುಟುಂಬದವರು ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ವಿನ್ಯಾಸದ ಬಸ್ ನಿಲ್ದಾಣ ನಿರ್ಮಿಸಿದ್ದರು.
ಈ ಸಂದರ್ಭ ಹಕ್ಲಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಚೇತನ್ ಮೊಗವೀರ, ಮಾಜಿ ಅಧ್ಯಕ್ಷ ಸುಭಾಸ್ ಶೆಟ್ಟಿ ಹೊಳ್ಮಗೆ, ಸದಸ್ಯ ಪ್ರವೀಣ್ ಶೆಟ್ಟಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ವಂಡಬಳ್ಳಿ ಜಯರಾಮ ಶೆಟ್ಟಿ, ಡಾ. ಚಂದ್ರಶೇಖರ ಶೆಟ್ಟಿ, ರೋಶನ್ ಶೆಟ್ಟಿ ನೂಜಾಡಿ, ವೇ.ಮೂ.ಕೃಷ್ಣ ಭಟ್ ನೂಜಾಡಿ, ಅಭಿಮನ್ಯು ಇದ್ದರು.
ಹಕ್ಲಾಡಿ ಎಸ್ಸೆಸ್ ಕೊಳ್ಕೆಬೈಲು ಸೂರಪ್ಪ ಶೆಟ್ಟಿ ಪ್ರೌಢಶಾಲಾ ಶಿಕ್ಷಕ ಡಾ.ಕಿಶೋರ್ ಕುಮಾರ್ ಶೆಟ್ಟಿ ನಿರೂಪಿಸಿದರು.