ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜು.18ರ ವರೆಗೆ ಮಳೆಯ ಪ್ರಮಾಣ ಹೆಚ್ಚಾಗಳಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಮಾಹಿತಿ ನೀಡಿದ್ದು, ಜಿಲ್ಲೆಯಲ್ಲಿ ಇಂದಿನಿಂದ ಜು.18 ರ ವರೆಗೆ ಸಾಕಷ್ಟು ಪ್ರಮಾಣದಲ್ಲಿ ಮಳೆ ಬರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಸುರಕ್ಷಿತವಾಗಿ ಇರುವಂತೆ ಮನವಿ ಮಾಡಿಕೊಂಡಿದ್ದಾರೆ.
ಜಿಲ್ಲೆಗೆ ಪ್ರವಾಸಿಗರು ಹೆಚ್ಚಾಗಿ ಆಗಮಿಸುತ್ತಿರುವುದರಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರ ತೀರಗಳಿಗೆ, ಬೀಚ್ ಗಳಿಗೆ ಹೋಗುವುದು, ಈಜಾಡುವುದು ಮಾಡಬಾರದು. ಸಮುದ್ರದಲ್ಲಿ ನೀರಿನ ಒರೆತ ಹೆಚ್ಚಾಗಿರುವುದರಿಂದ ಸಾವು ನೋವುಗಳು ಸಂಭವಿಸುವ ಸಾಧ್ಯತೆ ಇರುತ್ತದೆ ಆದ್ದರಿಂದ ಜಿಲ್ಲೆಗೆ ಬರುವ ಸಾರ್ವಜನಿಕರು ಎಚ್ಚರಿಕೆಯಿಂದ ಇದ್ದು ಸುರಕ್ಷಿತವಾಗಿರುವಂತೆ ಮನವಿ ಮಾಡಿಕೊಂಡಿದ್ದಾರೆ. ಕೆಲಸಗಳಿಗೆ ಹೊರಗೆ ತೆರಳುವವರಿಗೆ ಹಾಗೂ ಮೀನುಗಾರಿಕೆಗೆ ತೆರಳುವವರಿಗೆ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿಕೊಂಡರು.