ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಭಾರತೀಯ ಅಂಚೆ ಇಲಾಖೆಯ ವತಿಯಿಂದ ನಗರದ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮಾ ಏಜೆಂಟ್ ಆಗಿ ಕಾರ್ಯ ನಿರ್ವಹಿಸಲು 18 ರಿಂದ 50 ವರ್ಷದೊಳಗಿನ, ಕನಿಷ್ಟ ಎಸ್.ಎಸ್.ಎಲ್.ಸಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಆಧಾರ್ ಕಾರ್ಡ್, ಪಾನ್ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿ ಮೂಲ ಪ್ರತಿ ಹಾಗೂ ಝೆರಾಕ್ಸ್ ಪ್ರತಿ ಮತ್ತು ಎರಡು ಪಾಸ್ಪೋರ್ಟ್ ಸೈಜಿನ ಭಾವಚಿತ್ರದೊಂದಿಗೆ ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಜುಲೈ 30ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಸಂದರ್ಶನದಲ್ಲಿ ಹಾಜರಾಗಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2520471 ಅಥವಾ ಮೊ.ನಂ: 9448291071 ಅನ್ನು ಸಂಪರ್ಕಿಸುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.