ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬ್ಯಾಂಕಿಂಗ್ ಸೌಲಭ್ಯವನ್ನು ಕೃಷಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘದ ಮೂಲಕ ನೀಡಲಾಗುತ್ತಿದೆ. ಕೃಷಿಕರಿಗೆ ಆರ್ಥಿಕ ಸಹಕಾರದ ಜೊತೆಗೆ ಸರಳ ಬ್ಯಾಂಕಿಂಗ್ ವಿಧಾನ ಇನ್ನಷ್ಟು ಅನುಕೂಲವಾಗುತ್ತದೆ ಎಂದು ಕುಂದಾಪುರ ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಹೇಳಿದರು
ಅವರು ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ಮಿತ ಬೈಂದೂರು ಶಾಖೆಯ ನವೀಕೃತ ಕಛೇರಿಯನ್ನು ಉದ್ಘಾಟಿಸಿ ಈ ಮಾತುಗಳನ್ನಾಡಿದರು.
ಈ ಸಂದರ್ಭ ಸಂಘದ ಅಧ್ಯಕ್ಷ ಎಚ್. ಹರಿಪ್ರಸಾದ್ ಶೆಟ್ಟಿ,ಉಪಾಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಆಡಳಿತ ಮಂಡಳಿ ನಿರ್ದೇಶಕರಾದ ಎಂ. ಮೋಹನ್ ದಾಸ್ ಶೆಟ್ಟಿ, ಎಸ್. ರಾಜು ಪೂಜಾರಿ, ಕೆ.ಸುಧಾಕರ ಶೆಟ್ಟಿ, ಕೆ. ಭುಜಂಗ ಶೆಟ್ಟಿ, ಕೆ. ಮೋಹನ ಪೂಜಾರಿ, ಆನಂದ ಬಿಲ್ಲವ, ರವಿ ಗಾಣಿಗ, ಪ್ರಭಾಕರ ಶೆಟ್ಟಿ, ಎಸ್. ಜಯರಾಮ ಶೆಟ್ಟಿ, ಎಚ್. ದೀನಪಾಲ್ ಶೆಟ್ಟಿ, ಎಚ್. ಚಂದ್ರಶೇಖರ ಶೆಟ್ಟಿ, ಎಂ. ಮಹೇಶ್ ಹೆಗ್ಡೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಶೋಭಾ, ಕಟ್ಟಡದ ಮಾಲಕ ಜಗನ್ನಾಥ ಶೆಟ್ಟಿ ನಾಕಟ್ಟೆ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.