ಕೇಂದ್ರದಲ್ಲಿ ಬಾಕಿ ಇರುವ ಜಿಲ್ಲೆಯ ಯೋಜನೆಗಳು ಶೀಘ್ರ ಪೂರ್ಣ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೇಂದ್ರ ಸರ್ಕಾರದ ಮಟ್ಟದಲ್ಲಿ ಮಂಜೂರಾತಿಗೆ ಬಾಕಿ ಇರುವ ಜಿಲ್ಲೆಯ ವಿವಿಧ ಯೋಜನೆ ಮತ್ತು ಕಾಮಗಾರಿಗಳ ಪಟ್ಟಿಯನ್ನು ಕೂಡಲೇ ಸಲ್ಲಿಸಿ. ಈ ಬಗ್ಗೆ ಕೇಂದ್ರದ ಸಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ, ಈ ಬಗ್ಗೆ ಶೀಘ್ರದಲ್ಲಿ ಮಂಜೂರುಗೊಳಿಸಲು ಪ್ರಯತ್ನಿಸಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

Call us

Click Here

ಅವರು ವೀಡಿಯೋ ಸಭೆಯ ಮೂಲಕ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾನ್ಸೂನ್ ಹಾನಿಯ ಕುರಿತು ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ಸಾಗರ ಮಾಲಾ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳ ಬಗ್ಗೆ ವಿವರವಾದ ಮಾಹಿತಿ ನೀಡಿ.ಉಪ್ಪುಂದದಲ್ಲಿ 130 ಕೋಟಿರೂ.ವೆಚ್ಚದಲ್ಲಿ ಬಂದರು ನಿರ್ಮಾಣ ಕುರಿತಂತೆ ಕೇಂದ್ರ ಸಚಿವರೊಂದಿಗೆಚರ್ಚಿಸಲಾಗಿದೆ. ಕೇಂದ್ರದಲ್ಲಿ ಹೊಸ ಮೀನುಗಾರಿಕಾ ಮಸೂದೆ ಸಿದ್ಧವಾಗುತ್ತಿದ್ದು, ಈ ಬಗ್ಗೆ ಸಲಹೆ ಮತ್ತು ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಸಲ್ಲಿಸಿ ಎಂದು ಸಚಿವೆ ಶೋಭಾಕರಂದ್ಲಾಜೆ ಹೇಳಿದರು.

ಜಿಲ್ಲೆಯಲ್ಲಿಕೋವಿಡ್ 3ನೇ ಅಲೆ ಎದುರಿಸುವ ನಿಟ್ಟಿನಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಪಾಲನೆ ಕುರಿತು ಪರಿಶೀಲಿಸಿ. ಕಾರ್ಮಿಕರು ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಸಾಮಾಜಿಕ ಅಂತರ ಪಾಲನೆ ಕುರಿತು, ಕಾರ್ಖಾನೆಗಳಿಗೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲಿಸಬೇಕು. ಜಿಲ್ಲೆಯಲ್ಲಿ ಈಗಾಗಲೇ ಕಾಮಗಾರಿ ಆರಂಭಿಸಲಾಗಿರುವ ಆಕ್ಸಿಜನ್ ಘಟಕಗಳು ಶೀಘ್ರದಲ್ಲಿ ಕಾರ್ಯನಿರ್ವಹಣೆ ಮಾಡುವಂತೆಕ್ರಮ ಕೈಗೊಳ್ಳಿ.ದುರ್ಬಲ ವರ್ಗದವರಿಗೆ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡಿ. ಅಪೌಷ್ಠಿಕ ಮಕ್ಕಳನ್ನು ಗುರುತಿಸಿ ಅವರಿಗೆ ಪೌಷ್ಠಿಕ ಆಹಾರ ಸೌಲಭ್ಯಒದಗಿಸುವಂತೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡದಂತೆಎಚ್ಚರವಹಿಸುವಂತೆ ಸೂಚಿಸಿದರು.

ಮಾನ್ಸೂನ್ ಅವಧಿಯಲ್ಲಿ ನೆರೆಹಾನಿಗೊಳಗಾಗುವ ಸಂತ್ರಸ್ಥರಿಗೆತಕ್ಷಣದಲ್ಲಿ ಪರಿಹಾರ ವಿತರಿಸುವಂತೆ ತಿಳಿಸಿದ ಸಂಸದರು, ಹಾನಿಗೊಳಗಾಗುವ ತಗ್ಗು ಪ್ರದೇಶಗಳನ್ನು ಗುರುತಿಸಿಕೊಂಡು ಆ ಪ್ರದೇಶದಲ್ಲಿಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಯಾವುದೇ ಸಂದರ್ಭದಲ್ಲಿ ನೆರವು ನೀಡಲು ಸಿದ್ಧವಾಗಿರುವಂತೆ ಸೂಚಿಸಿದರು.

Click here

Click here

Click here

Click Here

Call us

Call us

ಜಿಲ್ಲಾಧಿಕಾರಿ ಜಿ. ಜಗದೀಶ್ ಮಾತನಾಡಿ, ಜಿಲ್ಲೆಯಲ್ಲಿ ಈ ವರ್ಷ ಪ್ರಾಕೃತಿಕ ವಿಕೋಪದಿಂದ 110 ಕೋಟಿರೂ.ಮೂಲಸೌಕರ್ಯಕ್ಕೆ ಹಾನಿಯಾಗಿದ್ದು, ಇದರಲ್ಲಿ ಸಮುದ್ರ ಕೊರೆತದಿಂದ 99 ಕೋಟಿರೂ. ಹಾನಿ ಸಂಭವಿಸಿದೆ. ಈ ಬಗ್ಗೆ ಪರಿಹಾರಕ್ಕಾಗಿಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೋವಿಡ್ 3 ನೇ ಅಲೆ ತಡೆಯುವ ನಿಟ್ಟಿನಲ್ಲಿಜಿಲ್ಲೆಯಲ್ಲಿಒಟ್ಟು 50 ಮಕ್ಕಳ ಐಸಿಯು ಬೆಡ್ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಜಿಲ್ಲೆಯ 2.40 ಲಕ್ಷ ಮಕ್ಕಳ ಆರೋಗ್ಯತಪಾಸಣೆಕಾರ್ಯ ನಡೆಯುತ್ತಿದೆ. ಎಂಡೋ ಸಲ್ಫಾನ್ ಪೀಡಿತರಿಗೆ ಹಾಗೂ ಅವರಕುಟುಂಬದವರಿಗೆ ಲಸಿಕೆ ನೀಡಲಾಗುತ್ತಿದೆ. ನೆರೆ ಪರಿಹಾರಕ್ಕಾಗಿ 11 ಕೋಟಿರೂ.ಹಣ ಇದ್ದು, ಅನುದಾನದ ಕೊರತೆ ಇಲ್ಲ ವಿಕೋಪ ನಿರ್ವಹಣೆಗೆಎಲ್ಲಾಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ವಿವಿಧಇಲಾಖೆಯ ಅಧಿಕಾರಿಗಳು ಇದ್ದರು.

Leave a Reply