Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲೆ: ಕೋವಿಡ್-19 ಪರಿಷ್ಕೃತ ಮಾರ್ಗಸೂಚಿ ಪ್ರಕಟ
    ಉಡುಪಿ ಜಿಲ್ಲೆ

    ಉಡುಪಿ ಜಿಲ್ಲೆ: ಕೋವಿಡ್-19 ಪರಿಷ್ಕೃತ ಮಾರ್ಗಸೂಚಿ ಪ್ರಕಟ

    Updated:18/07/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಸರ್ಕಾರದ ದಿನಾಂಕ 03.07.2021ರ ಆದೇಶದಲ್ಲಿ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಲಾಗಿತ್ತು , ಸದರಿ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನದಿಂದ ರಾಜ್ಯಾದ್ಯಂತ ಪೊಸಿಟಿವ್ ಪ್ರಕರಣಗಳ ಪ್ರಮಾಣದ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿರುವುದು ಕಂಡುಬಂದಿದ್ದರಿಂದ ಸರ್ಕಾರದ ಆದೇಶವನ್ನು ದಿನಾಂಕ 02.08.2021 ರವರೆಗೆ ಮುಂದುವರಿಸಿ ಹೆಚ್ಚುವರಿ ಚಟುವಟಿಕೆಗಳಿಗೆ ಅನುಮತಿಯನ್ನು ನೀಡಿರುತ್ತದೆ. ಆದ್ದರಿಂದ ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಪರಿಗಣಿಸಿ, ಸಾರ್ವಜನಿಕರ ಆರೋಗ್ಯದ ಹಿತ ದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ದಿನಾಂಕ 19.07.2021 ರಿಂದ ಮುಂದಿನ ಆದೇಶದವರಗೆ ಈ ಕೆಳಗಿನಂತೆ ಆದೇಶ ಹೊರಡಿಸುತ್ತೇನೆ.

    Click Here

    Call us

    Click Here

    A) ಜಿಲ್ಲೆಯಾದ್ಯಂತ ಸಂಜೆ 10.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯ ವರೆಗೆ ಅನುಬಂಧ- A ರಲ್ಲಿನ ಮಾರ್ಗಸೂಚಿಗಳಂತೆ ಕಟ್ಟುನಿಟ್ಟಿನ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ.

    B) ಈ ಕೆಳಗಿನ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಚಟುವಟಿಕೆಗಳನ್ನು ಕಂಟೈನ್ಮೆಂಟ್ ವ್ಯಾಪ್ತಿಯ ಹೊರಗಡೆ ಜಿಲ್ಲೆಯಾದ್ಯಂತ ಅನುಮತಿಸಲಾಗಿದೆ.
     ಪಬ್ ಗಳಿಗೆ ಅನುಮತಿ ಇರುವುದಿಲ್ಲ.
     ಕೋವಿಡ್-19 ಸೂಕ್ತ ನಡವಳಿಕೆಯನ್ನು ಹಾಗೂ ಸಂಬಂಧಪಟ್ಟ ಇಲಾಖೆಯವರು ಹೊರಡಿಸುವ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ಸ್ಪರ್ಧಾತ್ಮಕ ತರಬೇತಿಗಳಿಗೆ ಮಾತ್ರ ಈಜು ಕೊಳಗಳನ್ನು ತೆರೆಯಲು ಅನುಮತಿಸಿದೆ.
     ಕೋವಿಡ್-19 ಸೂಕ್ತ ಶಿಷ್ಟಾಚಾರವನ್ನು ಅನುಸರಿಸುವ ಷರತ್ತುಗಳೊಂದಿಗೆ ಕ್ರೀಡಾಪಟುಗಳ ಅಭ್ಯಾಸಕ್ಕೆ ಮಾತ್ರ ಕ್ರೀಡಾ ಸಂಕೀರ್ಣಗಳನ್ನು/ ಸ್ಟೇಡಿಯಂಗಳನ್ನು ತೆರೆಯಲು ಅನುಮತಿಸಿದೆ. ಆದರೆ ಪ್ರೇಕ್ಷಕರಿಗೆ ಅನುಮತಿ ಇರುವುದಿಲ್ಲ.
     ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಅಕಾಡೆಮಿಕ್‌, ಸಾಂಸ್ಕೃತಿಕ, ಧಾರ್ಮಿಕ ಸಭೆ ಸಮಾರಂಭಗಳು ಮತ್ತು ಇತರೆ ಜನ ಸೇರುವ ಕಾರ್ಯಕ್ರಮಗಳಿಗೆ ಅನುಮತಿ ಇರುವುದಿಲ್ಲ.
     ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP)ಅನುಸರಿಸುವ ಷರತ್ತುಗಳೊಂದಿಗೆ ಮದುವೆ/ ಕೌಟುಂಬಿಕ ಶುಭ ಸಮಾರಂಭಗಳಿಗೆ ಸರ್ಕಾರದ ಹಿಂದಿನ ಮಾರ್ಗಸೂಚಿಯಂತೆ ಈ ಕೆಳಗೆ ನಿಗದಿಪಡಿಸಿದ ಷರತ್ತಿಗೊಳಪಟ್ಟು 100 ಜನರಿಗೆ ಮೀರದಂತೆ ನಡೆಸಲು ಅನುಮತಿಸಲಾಗಿದೆ.
    • ಮದುವೆ/ ಕೌಟುಂಬಿಕ ಶುಭ ಸಮಾರಂಭಗಳನ್ನು ಆಯೋಜಿಸುವವರು ಆಮಂತ್ರಣ ಪತ್ರ ಅಥವಾ ಇತರ ಯಾವುದೇ ಸಂಬಂಧಿತ ದಾಖಲೆಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಸಲ್ಲಿಸಬೇಕು.
    • ಅರ್ಜಿಯ ಸ್ವೀಕೃತಿಯ ಮೇರೆಗೆ, ತಹಶೀಲ್ದಾರರು ಪ್ರತಿ ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ರಮಕ್ಕೆ 100 ಪಾಸ್ಗಳನ್ನು ನೀಡಬೇಕು
    • ಪಾಸ್ ಹೊಂದಿರುವ ಜನರಿಗೆ ಮಾತ್ರ ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ಕೆ ಹಾಜರಾಗಲು ಅವಕಾಶವಿರುತ್ತದೆ ಮತ್ತು ಪಾಸ್ ಅನ್ನು ವರ್ಗಾಯಿಸಲು ಅವಕಾಶವಿರುವುದಿಲ್ಲ.
    • ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ಕೆ ಹಾಜರಾಗುವ ಜನರು ಕೋವಿಡ್ ಸಮುಚಿತ ವರ್ತನೆಯನ್ನು (COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಅವರ ಪಾಸ್ಗಳನ್ನು ಅಧಿಕೃತ ಪರಿಶೀಲನಾ ಅಧಿಕಾರಿಗಳಿಗೆ ತೋರಿಸುವುದು.

     ಕೋವಿಡ್-19 ಸೂಕ್ತ ನಡವಳಿಕೆಯಂತೆ ಅಂತ್ಯ ಸಂಸ್ಕಾರಕ್ಕೆ 20 ಜನಕ್ಕೆ ಮೀರದಂತೆ ನಡೆಸಲು ಅನುಮತಿಸಲಾಗಿದೆ.
     ಕೋವಿಡ್‌ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಹೊರಡಿಸಲಾದ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ಪೂಜಾ ಸ್ಥಳಗಳಲ್ಲಿ ( Temple, Mosques, Churches, Gurudwaras, and other religious places ) ದೇವರ ದರ್ಶನಕ್ಕೆ/ಪ್ರಾರ್ಥನೆಗೆ ಮಾತ್ರ ಅನುಮತಿಸಲಾಗಿದೆ. ಆದರೆ ಯಾವುದೇ ಸೇವೆ/ಅರ್ಪಣೆ ಅಥವಾ ಇತರೆ ಚಟುವಟಿಕೆಗಳಿಗೆ ಅನುಮತಿ ಇರುವುದಿಲ್ಲ.
     ಕೋವಿಡ್-19 ಸೂಕ್ತ ನಡವಳಿಕೆಯಂತೆ ಶೇ. 100 ರಷ್ಟು ಆಸನ ಸಾಮರ್ಥ್ಯದವರೆಗೆ ಸಾರ್ವಜನಿಕ ಸಾರಿಗೆಗಳಿಗೆ ಅನುಮತಿಸಲಾಗಿದೆ.(Only for seating Capacity of Public Transport )
     ಎಲ್ಲಾ ಅಂಗಡಿಗಳು, ರೆಸ್ಟೋರೆಂಟ್ ಗಳು, ಮಾಲ್ ಗಳು, ಖಾಸಗಿ ಕಚೇರಿಗಳು ಮತ್ತು ಮುಚ್ಚಿದ (Closed Places) ಸ್ಥಳಗಳಲ್ಲಿ, ಕೋವಿಡ್-19 ಸೂಕ್ತ ನಡವಳಿಕೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ತಪ್ಪಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರನ್ವಯ ಕ್ರಮ ಕೈಕೊಳ್ಳಲಾಗುವುದು.
     ಸಿನೆಮಾ ಹಾಲ್‌ಗಳು / ಮಲ್ಟಿಪ್ಲೆಕ್ಸ್‌ಗಳು / ಚಿತ್ರಮಂದಿರಗಳು / ರಂಗಮಂದಿರಗಳು / ಸಭಾಂಗಣಗಳು ಮತ್ತು ಅಂತಹದೇ ರೀತಿಯ ಸ್ಥಳಗಳಲ್ಲಿ ಶೇ. 50 ರಷ್ಟು ಆಸನ ಸಾಮರ್ಥ್ಯದೊಂದಿಗೆ COVID ಸೂಕ್ತ ನಡವಳಿಕೆ ಮತ್ತು ಸಂಬಂಧಪಟ್ಟ ಇಲಾಖೆಗಳು ನೀಡುವ SOP ಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಕಾರ್ಯನಿರ್ವಹಿಸಲು ಅನುಮತಿಯನ್ನು ನೀಡಲಾಗಿದೆ.
     ಉನ್ನತ ಶಿಕ್ಷಣ ಇಲಾಖೆಗೆ ಸೇರಿದ ಕಾಲೇಜುಗಳು ಮತ್ತು ಸಂಸ್ಥೆಗಳನ್ನು ದಿನಾಂಕ :26/7/2021 ರಿಂದ COVID ಸೂಕ್ತ ನಡವಳಿಕೆ ಮತ್ತು ಸಂಬಂಧಪಟ್ಟ ಇಲಾಖೆಗಳು ನೀಡುವ SOP ಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ತೆರೆಯಲು ಅನುಮತಿಸಲಾಗಿದೆ. ವಿದ್ಯಾರ್ಥಿಗಳು, ಬೋಧನೆ ಮತ್ತು ಬೋಧಕೇತರ / ಇತರ ಸಿಬ್ಬಂದಿಗಳಿಗೆ COVID-19 ಲಸಿಕೆಯ ಕನಿಷ್ಠ ಒಂದು ಡೋಸ್ ಲಸಿಕೆಯನ್ನು ತೆಗೆದುಕೊಂಡು ಮಾತ್ರ ಕಾಲೇಜುಗಳು / ಸಂಸ್ಥೆಗಳಿಗೆ ಹಾಜರಾಗಲು ಅನುಮತಿಸಲಾಗಿದೆ. ವಿದ್ಯಾರ್ಥಿಗಳ ಹಾಜರಾತಿ ಐಚ್ಚಿಕವಾಗಿರುತ್ತದೆ.
     ಉನ್ನತ ಶಿಕ್ಷಣ ಇಲಾಖೆಗೆ ಸೇರಿದ ಕಾಲೇಜುಗಳನ್ನು ಮತ್ತು ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿ ಇತರ ಶೈಕ್ಷಣಿಕ ಸಂಸ್ಥೆಗಳು/ ಟುಟ್ಯೋರಿಯಲ್ಸ್/ ಕಾಲೇಜುಗಳು ಮುಂದಿನ ಆದೇಶದವರೆ ಮುಚ್ಚಲ್ಪಟಿರುತ್ತವೆ.
     ದೀರ್ಘಾವಧಿಯ ತಾಂತ್ರಿಕ ಕೋರ್ಸ್‌ಗಳನ್ನು ಒಳಗೊಂಡಂತೆ ಎಲ್ಲಾ ಕೌಶಲ್ಯ ಅಭಿವೃದ್ಧಿ ತರಬೇತಿಗಳಿಗೆ COVID ಸೂಕ್ತ ನಡವಳಿಕೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಕಾರ್ಯನಿರ್ವಹಿಸಲು ಅನುಮತಿಯನ್ನು ನೀಡಲಾಗಿದೆ. ವಿದ್ಯಾರ್ಥಿಗಳು, ಬೋಧನೆ ಮತ್ತು ಬೋಧಕೇತರ / ಇತರ ಸಿಬ್ಬಂದಿಗಳಿಗೆ COVID-19 ಲಸಿಕೆಯ ಕನಿಷ್ಠ ಒಂದು ಡೋಸ್ ಲಸಿಕೆಯನ್ನು ತೆಗೆದುಕೊಂಡು ಮಾತ್ರ ಸಂಸ್ಥೆಗಳಿಗೆ ಹಾಜರಾಗಲು ಅನುಮತಿಸಲಾಗಿದೆ.
     ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ವೈದ್ಯಕೀಯ ಸಂಸ್ಥೆಗಳ ಪುನರಾರಂಭ (ವೈದ್ಯಕೀಯ / ದಂತ ಕಾಲೇಜುಗಳು, ಆಯುಷ್ ಗೆ ಸಂಬಂಧಿಸಿದ ಕಾಲೇಜುಗಳು ಮತ್ತು ಸಂಸ್ಥೆಗಳು , ನರ್ಸಿಂಗ್ ಕಾಲೇಜುಗಳು ಮತ್ತು ಇತರ ಅಲೈಡ್ ಹೆಲ್ತ್ ಕೇರ್ ಶೈಕ್ಷಣಿಕ ಸಂಸ್ಥೆಗಳು / ಕಾಲೇಜುಗಳು) COVID ಸೂಕ್ತ ನಡವಳಿಕೆ ಮತ್ತು ಸಂಬಂಧಪಟ್ಟ ಇಲಾಖೆಗಳು ನೀಡುವ SOP ಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ತೆರೆಯಲು ಅನುಮತಿಸಲಾಗಿದೆ. ವಿದ್ಯಾರ್ಥಿಗಳು, ಬೋಧನೆ ಮತ್ತು ಬೋಧಕೇತರ / ಇತರ ಸಿಬ್ಬಂದಿಗಳಿಗೆ COVID-19 ಲಸಿಕೆಯ ಕನಿಷ್ಠ ಒಂದು ಡೋಸ್ ಲಸಿಕೆಯನ್ನು ತೆಗೆದುಕೊಂಡು ಮಾತ್ರ ಕಾಲೇಜುಗಳು / ಸಂಸ್ಥೆಗಳಿಗೆ ಹಾಜರಾಗಲು ಅನುಮತಿಸಲಾಗಿದೆ.

    C) ಕೋವಿಡ್ ಸಮುಚಿತ ವರ್ತನೆ
     COVID-19 ಸೂಕ್ತ ನಡವಳಿಕೆಯನ್ನು ಕಡ್ಡಾಯವಾಗಿ ಪಾಲಿಸಲು ಮುಖಗವಸುಗಳನ್ನು ಧರಿಸುವುದು, ಕೈಗಳ ನೈರ್ಮಲ್ಯ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳುವುದು.
     ಮಾಸ್ಕ್ ಧರಿಸುವುದು, ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಅತ್ಯವಶ್ಯಕ ಕ್ರಮವಾಗಿದ್ದು, ಮುಖಗವಸುಗಳನ್ನು ಧರಿಸದ ವ್ಯಕ್ತಿಗಳ ವಿರುದ್ಧ ಮಹಾ ನಗರ ಪಾಲಿಕೆ ಪ್ರದೇಶಗಳಲ್ಲಿ ರೂ. 250/- ಮತ್ತು ಇನ್ನಿತರ ಪ್ರದೇಶಗಳಲ್ಲಿ ರೂ.100/- ದಂಡ ವಿಧಿಸಲಾಗುವುದು.
     ಕೋವಿಡ್ ನಿರ್ವಹಣೆಗಾಗಿ ರಾಷ್ಟ್ರೀಯ ನಿರ್ದೇಶನಗಳನ್ನು ಜಿಲ್ಲೆಯಾದ್ಯಂತ ಕಟ್ಟುನಿಟ್ಟಾಗಿ ಪಾಲಿಸುವುದು.

    Click here

    Click here

    Click here

    Click Here

    Call us

    Call us

    ಮೇಲಿನ ಆದೇಶಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, Disaster Management Act 2005 , Karnataka Epidemic Diseases act 2020 ಮತ್ತು IPC ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮಕೈಗೊಳ್ಳಲಾಗುವುದು. ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆಗಳಿಗೆ ಅನ್ವಯಿಸುವುದಿಲ್ಲ

    ನೈಟ್ ಕರ್ಫ್ಯೂ ಗೆ ಮಾರ್ಗಸೂಚಿಗಳು :
    1) ರಾತ್ರಿ 10.00 ರಿಂದ ಪೂರ್ವಾಹ್ನ 05.00 ರ ನಡುವೆ ಅಗತ್ಯ ಚಟುವಟಿಕೆಗಳಿಗೆ ಹೊರತುಪಡಿಸಿ ಜನರ ಓಡಾಟಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
    2) ರೋಗಿಗಳು ಮತ್ತು ಅವರೊಂದಿಗಿರುವ ಪರಿಚಾರಕರು – ತುರ್ತು ಅಗತ್ಯತೆಗಾಗಿ ವ್ಯಕ್ತಿಗಳನ್ನು ಸ್ಥಳಾಂತರಿಸಲು ಅನುಮತಿಸಿದೆ.
    3) ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕೈಗಾರಿಕೆಗಳು / ಕಂಪನಿಗಳಿಗೆ, ರಾತ್ರಿ ಸಮಯದಲ್ಲಿ ಕಾರ್ಯಾಚರಿಸಲು ಅನುಮತಿಯನ್ನು ನೀಡಲಾಗಿದೆ. ಹಾಗೂ ಅಂತಹ ಸಂಸ್ದೆಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರ, ಸಂಸ್ಧೆಯಿಂದ ನೀಡಲಾದ ಸೂಕ್ತ ಗುರುತಿನ ಚೀಟಿ / ಅನುಮತಿಗೆ ಸಂಬಂಧಿಸಿದ ದಾಖಲೆಯನ್ನು ಸಲ್ಲಿಸುವ ಮೂಲಕ ಸಂಚಾರಿಸಬಹುದಾಗಿದೆ.
    4) ದೂರವಾಣಿ ಹಾಗೂ ಅಂತರ್ಜಾಲ ಸೇವೆಯನ್ನು ಒದಗಿಸುವ ನೌಕರರು ಹಾಗೂ ವಾಹನಗಳನ್ನು ತಮ್ಮ ಸಂಸ್ಧೆಯಿಂದ ಪಡೆದಿರುವ ಸೂಕ್ತ ಗುರುತಿನ ಚೀಟಿಯನ್ನು ಸಲ್ಲಿಸಿ ಸಂಚಾರಿಸಬಹುದಾಗಿದೆ. ಮಾಹಿತಿ ತಂತ್ರಜ್ಜಾನ ಮತ್ತು ಮಾಹಿತಿ ತಂತ್ರಜ್ಜಾನ ಆಧಾರಿತ ಕಂಪನೆ / ಸಂಸ್ದೆ ( IT and ITeS companies /organization) ಗಳಲ್ಲಿ ಕಾರ್ಯ ನಿರ್ವಹಿಸುವ ಅಗತ್ಯ ಸಿಬ್ಬಂದಿ ಹಾಗೂ ಕಾರ್ಮಿಕರನ್ನು ಹೊರತುಪಡಿಸಿ ಇತರೆ ಸಿಬ್ಬಂದಿ ಹಾಗೂ ಕೆಲಸಗಾರರು ಮನೆಗಳಲ್ಲಿಯೇ ಕಾರ್ಯನಿರ್ವಹಿಸುವುದು (work from home)
    5) ವೈದ್ಯಕೀಯ, ತುರ್ತು ಹಾಗೂ ಔಷಧಾಲಯಗಳನ್ನು ಒಳಗೊಂಡ ಅವಶ್ಯಕ ಸೇವೆಗಳು ಯಥಾ ರೀತಿಯಲ್ಲಿ ಸರಕಾರದ ನಿಯಮಗಳೊಂದಿಗೆ ಕಾರ್ಯನಿರ್ವಹಿಸವುದು. ಹಾಗೂ ಇತರೆ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಿದೆ.
    6) ಎಲ್ಲಾ ತರಹದ ಟ್ರಕ್ ಗಳಲ್ಲಿ ಸಾಗಿಸುವ ಸರಕಗಳು, ಸರಕು ವಾಹನ ಅಥವಾ ಇತರೆ ಸರಕು ಸಾಗಾಟ ವಾಹನಗಳು , ಖಾಲಿ ವಾಹನಗಳನ್ನು ಒಳಗೊಂಡು ಓಡಾಟಕ್ಕೆ ಅವಕಾಶ ನೀಡಲಾಗಿದೆ. ಇ-ಕಾಮರ್ಸ್ ಕಂಪನಿಗಳು ಹಾಗೂ ಹೋಮ್ ಡೆಲಿವರಿ ಕೆಲಸವನ್ನು ಮುಂದುವರೆಸಲು ಅನುಮತಿಸಿದೆ.
    7) ಬಸ್ ಸೇವೆಗಳು, ರೈಲುಗಳು ಮತ್ತು ವಿಮಾನ ಪ್ರಯಾಣವನ್ನು ಅನುಮತಿಸಲಾಗಿದೆ .ವಿಮಾನ ನಿಲ್ದಾಣಕ್ಕೆ, ರೈಲ್ವೆ ನಿಲ್ದಾಣಕ್ಕೆ ,ಬಸ್ ನಿಲ್ದಾಣಕ್ಕೆ ಹಾಗೂ ವಿಮಾನ ನಿಲ್ದಾಣಗಳಿಂದ, , ರೈಲ್ವೆ ನಿಲ್ದಾಣಗಳಿಂದ , ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಓಡಾಟವನ್ನು ಅನುಮತಿಸಿದೆ. ಪ್ರಯಾಣ ಮಾಡುವ ಸಂಧರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು / ಟಿಕೆಟುಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    5 × 3 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.