Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಾಂತಿಯುತ ಬಕ್ರೀದ್ ಆಚರಣೆಗೆ ಕ್ರಮ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ
    Uncategorized

    ಶಾಂತಿಯುತ ಬಕ್ರೀದ್ ಆಚರಣೆಗೆ ಕ್ರಮ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಬಕ್ರೀದ್ ಹಬ್ಬದ ಸಂದರ್ಭದಲ್ಲಿ , ಸರ್ಕಾರದ ಆದೇಶದಂತೆ , ಅಕ್ರಮವಾಗಿ ಪ್ರಾಣಿಗಳ ಅನಧಿಕೃತ ಸಾಗಾಣಿಕೆ ಹಾಗೂ ವಧೆ ತಡೆಗಟ್ಟುವ ಕುರಿತು ಜಿಲ್ಲೆಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಪರ ಜಿಲ್ಲಾಧಿಕಾರಿ ರವರ ಅಧ್ಯಕ್ಷತೆಯಲ್ಲಿ , ಪ್ರಾಣಿಗಳ ಅನಧಿಕೃತ ಸಾಗಾಣಿಕೆ ಮತ್ತು ವಧೆ ತಡೆಗಟ್ಟುವ ಸಂಬಂಧ ರಚಿಸಿರುವ ಜಿಲ್ಲಾ ಮಟ್ಟದ ಸಮಿತಿಯ ಸಭೆಯು ಇತ್ತೀಚೆಗೆ ನಡೆಯಿತು.

    Click Here

    Call us

    Click Here

    ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳು ಮಾತನಾಡಿ, ಜುಲೈ 21ರಂದು ನಡೆಯುವ ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಅಕ್ರಮವಾಗಿ ಒಂಟೆ/ಗೋವುಗಳ ಹತ್ಯೆ ಹಾಗೂ ಅನಧಿಕೃತ ಸಾಗಾಣಿಕೆಯನ್ನು ತಡೆಗಟ್ಟುವ ಸಂಬಂಧ ನಿರ್ದೇಶನಗಳನ್ನು ಪಾಲಿಸುವಂತೆ ಪೋಲೀಸ್ ಇಲಾಖೆ, ನಗರ ಸಭೆ, ಪುರಸಭೆ, ಸಾರಿಗೆ ಅಧಿಕಾರಿ ಮತ್ತು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

    ಪಶುಗಳ ಅಧಿಕೃತ ಸಾಗಾಣಿಕೆಗೆ ಪಶು ಇಲಾಖೆಯಿಂದ ಅನುಮತಿ ಪಡೆಯಬಹುದು. ಕೃಷಿಗೆ ಮತ್ತು ಪಶು ಸಂಗೋಪನೆಗೆ ಮಾತ್ರ ಸಾಗಾಟಕ್ಕೆ ಅನುಮತಿ ಇರುವುದು. ರೋಗಗ್ರಸ್ತ ಜಾನುವಾರುಗಳಿಗೆ ಸಂಬಂಧಿಸಿದಂತೆ ವೈದ್ಯಕೀಯ ಪ್ರಮಾಣ ಪತ್ರ ಹಾಗೂ ವೈದ್ಯರ ಸಮಕ್ಷಮ ದಯಾಮರಣಕ್ಕೆ ಅವಕಾಶವಿರುವುದು, ಸಾರಿಗೆ ಇಲಾಖೆಯಿಂದ ಅನಧಿಕೃತವಾಗಿ ಪ್ರಾಣಿಗಳ ಸಾಗಾಟದ ವಾಹನಗಳನ್ನು ಪತ್ತೆ ಹಚ್ಚಿ ಗೋ ಶಾಲೆಗಳಿಗೆ ಹಸ್ತಾಂತರಿಸುವುದು. ವಶಪಡಿಸಿಕೊಂಡ ಜಾನುವಾರುಗಳಿಗೆ ಅಗತ್ಯವಿರುವ ಚಿಕಿತ್ಸೆಯನ್ನು ನೀಡಲು ಪಶುವೈದ್ಯಾಧಿಕಾರಿ, ಪಶು ಚಿಕಿತ್ಸಾಲಯ, ಉಡುಪಿ ಇವರಿಗೆ ನಿರ್ದೇಶನ ನೀಡುವಂತೆ ಪಶುಸಂಗೋಪನಾ ಇಲಾಖೆಗೆ ಸೂಚಿಸಿದರು ಹಾಗೂ ಜಾನುವಾರುಗಳಿಗೆ ಅಗತ್ಯವಿರುವ ಮೇವು ಮತ್ತು ನೀರಿನ ವ್ಯವಸ್ಥೆಯನ್ನು ಕಲ್ಪಿಸಲು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

    ಪ್ರಕರಣ ದಾಖಲಾಗಿ ಗೋಶಾಲೆಗೆ ಹಸ್ತಾಂತರವಾದ ಗೋವುಗಳನ್ನು ನ್ಯಾಯಾಲಯದಿಂದ ಆದೇಶವಾದಾಗ ಗೋಮಾಲಕರು ಹಿಂದೆ ಪಡೆಯುವಾಗ ಸದರಿ ಗೋವುಗಳು ಗೋ ಶಾಲೆಯಲ್ಲಿದ್ದಷ್ಟು ದಿನಗಳ ನಿರ್ವಹಣಾ ವೆಚ್ಚವನ್ನು ಗೋಶಾಲೆಗಳಿಗೆ ಪಾವತಿಸುವಂತೆ ನ್ಯಾಯಾಲಯದಿಂದ ಆದೇಶ ಆಗುವಂತೆ ಕ್ರಮವಹಿಸುವುದು, ಅನಧಿಕೃತ ವಧಾಗಾರಗಳನ್ನು ಪತ್ತೆ ಹಚ್ಚಿ, ಮಾಹಿತಿ ದೊರಕಿದ ತಕ್ಷಣ ಕಾನೂನು ಕ್ರಮವಹಿಸುವುದು, ಅನಧಿಕೃತ ಗೋ ವಧೆ ಮಾಡುವವರನ್ನು ಪತ್ತೆ ಹಚ್ಚಿ ಪೋಲೀಸ್ ಠಾಣೆಗೆ ಕರೆಸಿ ತಿಳುವಳಿಕೆ ನೀಡಿ ಮುಚ್ಚಳಿಕೆ ಪಡೆಯುವುದು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾವಹಿಸುವುದು.

    ತಾಲೂಕಿನ ತಹಶೀಲ್ದಾರರು ಕಡ್ಡಾಯವಾಗಿ ಶಾಂತಿ ಸಭೆಗಳನ್ನು ನಡೆಸುವುದು. ಹಬ್ಬವನ್ನು ಶಾಂತಿಯುತವಾಗಿ ಮತ್ತು ಸೌಹಾರ್ದಯುತವಾಗಿ ಆಚರಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದು ಮತ್ತು ಮೇಲುಸ್ತುವಾರಿ ವಹಿಸುವ ಬಗ್ಗೆ ನಿರ್ದೇಶನ ನೀಡಿದರು, ಕಾನೂನನ್ನು ಉಲ್ಲಂಘಿಸಿ ಅಕ್ರಮವಾಗಿ ಅಥವಾ ಅನಧಿಕೃತವಾಗಿ ಪ್ರಾಣಿಗಳನ್ನು ಸಾಗಾಣಿಕೆ ಮಾಡುತ್ತಿದ್ದಲ್ಲಿ , ಸಾರ್ವಜನಿಕರು ಈ ಬಗ್ಗೆ ಸಂಬಂಧಿಸಿದ ಹತ್ತಿರದ ಪೋಲೀಸ್ ಠಾಣೆ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಹೇಳಿದರು.

    Click here

    Click here

    Click here

    Click Here

    Call us

    Call us

    ಪ್ರಮುಖ ಪ್ರಾರ್ಥನಾ ಸ್ಥಳಗಳಲ್ಲಿ ಸೂಕ್ತ ಬ್ಯಾರಿಕೇಡ್ ವ್ಯವಸ್ಥೆಗಳನ್ನು ಮಾಡುವಂತೆ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತು, ವಾಹನಗಳ ಸುಗಮ ಸಂಚಾರ ಮತ್ತು ವಾಹನಗಳ ನಿಲುಗಡೆಗಾಗಿ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಪೋಲೀಸ್ ಇಲಾಖೆಗೆ ನಿರ್ದೇಶನ ನೀಡಿದರು.

    ಪಾರ್ಥನಾ ಸ್ಥಳಗಳಲ್ಲಿ ಕೋವಿಡ್ -19 ಸಾಂಕ್ರಮಿಕ ರೋಗವು ಹರಡುವುದನ್ನು ತಡೆಗಟ್ಟಲು ಸರ್ಕಾರದ ಆದೇಶವನ್ನು ಪಾಲಿಸುವುದು, ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಅಗತ್ಯ ಮುಂಜಾಗ್ರತ ಕ್ರಮ ಕೈಗೊಂಡಿರುವುದನ್ನು ಖಾತ್ರಿಪಡಿಸಿಕೊಳ್ಳುವಂತೆ ಸೂಚಿಸಿದರು.

    ಜಿಲ್ಲಾದ್ಯಂತ ರಾತ್ರಿ ತಪಾಸಣಾ ಕೇಂದ್ರ, ಹಾಗೂ ದಿನದ ಸಮಯದಲ್ಲಿ ತಪಾಸಣಾ ಕೇಂದ್ರಗಳಿದ್ದು, ಸದ್ರಿ ಕೇಂದ್ರಗಳಿಗೆ ಈ ಬಗ್ಗೆ ಹೆಚ್ಚಿನ ಜಾಗರೂಕತೆ ಇರುವಂತೆ ಸೂಚನೆ ನೀಡಲು, ಸಬ್ ಡಿವಿಜನ್ ಮಟ್ಟದಲ್ಲಿ ಪಿ.ಎಸ್.ಐ ಯನ್ನೊಳಗೊಂಡ ವಿಶೇಷ ತಪಾಸಣಾ ತಂಡವೂ ಸಹ ಈ ಬಗ್ಗೆ ನಿಗಾವಹಿಸಲು ಹಾಗೂ ಠಾಣಾ ವ್ಯಾಪ್ತಿಯಲ್ಲಿ ಧಾರ್ಮಿಕ ಮುಖಂಡರೊಡನೆ ಸ್ನೇಹ ಸೌಹಾರ್ದ ಸಭೆಗಳನ್ನು ನಡೆಸುವಂತೆ ಸೂಚಿಸಿದರು.

    ಮೇಲ್ಕಂಡ ಎಲ್ಲಾ ನಿರ್ದೇಶನಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಶಾಂತಿಯುತವಾಗಿ ಬಕ್ರೀದ್ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಎಲ್ಲಾ ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಯೂ ಅಗತ್ಯ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳುವುದೆಂದು ನಿರ್ದೇಶನಗಳನ್ನು ನೀಡಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    04/06/2026

    ಉಡುಪಿ: ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

    30/05/2026

    ಕೊಲ್ಲೂರು ಅಪಘಾತದಲ್ಲಿ ಮೃತ ಮಹಿಳೆಯ ಚಿನ್ನ ಕದ್ದ ಪ್ರಕರಣ: ಆರೋಪಿ ಹೇಮಂತ್ ಬಂಧನ

    26/05/2026
    Leave A Reply Cancel Reply

    nineteen + 8 =

    Call us

    Click Here

    Call us

    Call us

    Call us
    Highest Viewed Recently
    • ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನ
    • ಕುಂದಾಪುರ: ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ
    • ಕೋಟದಲ್ಲಿ ಆದರ್ಶ ಮಾನವ – ಕೃತಿ ಲೋಕಾರ್ಪಣೆ
    • ಉಡುಪಿ: ಜೂನ್‌ 12ರಂದು ನೇರ ಸಂದರ್ಶನ
    • ಸುರಕ್ಷಾ ಮಾಸಾಚರಣೆ: ಬಿದ್ಕಲ್ಕಟ್ಟೆ ಐಟಿಐಗೆ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.