Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಶಾಲ ಗಾಣಿಗ ಕೊಲೆ ಪ್ರಕರಣ: ಪತಿ ರಾಮಕೃಷ್ಣ ಹಾಗೂ ಓರ್ವ ಕಿಲ್ಲರ್ ಬಂಧನ
    ಅಪಘಾತ-ಅಪರಾಧ ಸುದ್ದಿ

    ವಿಶಾಲ ಗಾಣಿಗ ಕೊಲೆ ಪ್ರಕರಣ: ಪತಿ ರಾಮಕೃಷ್ಣ ಹಾಗೂ ಓರ್ವ ಕಿಲ್ಲರ್ ಬಂಧನ

    Updated:20/07/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಬ್ರಹ್ಮಾವರ ಸಮೀಪದ ಕುಮ್ರಗೋಡು ಮಿಲನ ರೆಸಿಡೆನ್ಸಿಯಲ್ಲಿ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಆಕೆಯ ಪತಿ ಬಿಜೂರು ಚಾರುಕೊಡ್ಲು ನಿವಾಸಿ ರಾಮಕೃಷ್ಣ ಗಾಣಿಗನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    Click Here

    Call us

    Click Here

    ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ ಅವರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ತನಿಕೆಗಾಗಿ ಆರೋಪಿಯನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.  ಇದರೊಂದಿಗೆ ಓರ್ವ ಸುಪಾರಿ ಕಿಲ್ಲರ್‌ನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ರಾಮಕೃಷ್ಣ ಗಾಣಿಗ ಇಬ್ಬರು ಉತ್ತರ ಪ್ರದೇಶ ಮೂಲದ ಇಬ್ಬರು ಸುಪಾರಿ ಕಿಲ್ಲರ್‌ಗಳಿಗೆ ಪತ್ನಿಯನ್ನು ಕೊಲೆ ಮಾಡುವಂತೆ ಸುಪಾರಿ ನೀಡಿದ್ದು ತನಿಕೆಯಲ್ಲಿ ಬಯಲಾಗಿದ್ದು ಅದರಂತೆ ಇಬ್ಬರು ಸುಪಾರಿ ಕಿಲ್ಲರ್‌ಗಳು ಈ ಕೃತ್ಯ ಎಸಗಿರುವುದು ಪೊಲೀಸರ ಪ್ರಾಥಮಿಕ ತನಿಕೆಯಲ್ಲಿ ತಿಳಿದುಬಂದಿದೆ. ಪತಿ ಪತ್ನಿಯರ ಮಧ್ಯೆ ಇದ್ದ ವಿರಸವೇ ಕೊಲೆಗೆ ಪ್ರಮುಖ ಕಾರಣವೆಂಬುದು ತನಿಕೆಯಲ್ಲಿ ತಿಳಿದುಬಂದಿದೆ.

    ಪತ್ನಿಯ ಅಂತ್ಯ ಸಂಸ್ಕಾರಕ್ಕೆಂದು ದುಬೈನಿಂದ ಊರಿಗೆ ಬಂಧಿದ್ದ ರಾಮಕೃಷ್ಣ ಗಾಣಿಗನ್ನು ಪೊಲೀಸರು ಎರಡು ಮೂರು ಭಾರಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಕೊನೆಯಲ್ಲಿ ಆತನೆ ಸುಪಾರಿ ನೀಡಿರುವುದು ಎಂದು ತಿಳಿದು ಬಂದಿತ್ತು. ಅದರಂತೆ ಪೊಲೀಸರು ಆತನ್ನು ಬಂಧಿಸಿದ್ದಾರೆ. ಇನ್ನು ಕೊಲೆಗೈದು ಪರಾರಿಯಾಗಿದ್ದ ಓರ್ವ ಸುಪಾರಿ ಕಿಲ್ಲರ್‌ನನ್ನು ಪೊಲೀಸರು ಉತ್ತರ ಪ್ರದೇಶದಲ್ಲಿ ಬಂಧಿಸಿದ್ದು ಇನ್ನೋರ್ವನಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ.

    Click here

    Click here

    Click here

    Click Here

    Call us

    Call us

    ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆಟೋ ಚಾಲಕ, ಬಿಜೂರು ಭಾಗದ ರಾಮಕೃಷ್ಣನ ಕೆಲ ಸ್ನೇಹಿತರನ್ನು ವಿಚಾರಣೆಗೊಳಪಡಿಸಿದ್ದರು. ಯಾವುದೇ ಸುಳಿವಿಲ್ಲದೆ ನಡೆದ ಕೊಲೆ ಪ್ರಕರಣವನ್ನು ವಿವಿಧ ಆಯಾಮಗಳಲ್ಲಿ ತನಿಕೆ ನಡೆಸಿ ಶೀಘ್ರವಾಗಿ ಭೇದಿಸುವಲ್ಲಿ ಬ್ರಹ್ಮಾವರ ಪೊಲೀಸ್ ತಂತ ಅಂತಿಮವಾಗಿ ಯಶಸ್ಸಿಯಾಗಿದೆ.

    ಇದನ್ನೂ ಓದಿ:
    ► ತಾರ್ಕಿಕ ಅಂತ್ಯಕ್ಕೆ ವಿಶಾಲ ಗಾಣಿಗ ಕೊಲೆ ಪ್ರಕರಣ? ಸುಪಾರಿ ಕೊಲೆಗೆ ಪತಿಯೇ ಸೂತ್ರದಾರ? – https://shareindia.in/?p=140 .
    ► ಮಗಳ ಹುಟ್ಟುಹಬ್ಬ ಮಾಡಬೇಕಿದ್ದ ಮನೆಯಲ್ಲೀಗ ಸೂತಕದ ಛಾಯೆ – https://kundapraa.com/?p=50073 .

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    sixteen + fifteen =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.