Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಳೆಯಿಂದ ಜೀವ ಹಾನಿಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ
    ಉಡುಪಿ ಜಿಲ್ಲೆ

    ಮಳೆಯಿಂದ ಜೀವ ಹಾನಿಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ರಾಜ್ಯದಲ್ಲಿ ಮುಂಗಾರು ಮಳೆಯ ಪ್ರಾಕೃತಿಕ ವಿಕೋಪದಿಂದ ಯಾವುದೇ ಮಾನವ ಮತ್ತು ಜಾನುವಾರುಗಳ ಜೀವ ಹಾನಿಯಾಗದಂತೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೂಚನೆ ನೀಡಿದರು.

    Click Here

    Call us

    Click Here

    ಅವರು ವೀಡಿಯೋ ಸಂವಾದದ ಮೂಲಕ ರಾಜ್ಯದಲ್ಲಿ ಅಧಿಕವಾಗಿ ಮಳೆಯಾಗುತ್ತಿರುವ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದರು.

    ಮುಂಗಾರು ಮಳೆಯ ವಿಕೋಪ ಸಂದರ್ಭದಲ್ಲಿ ವೃದ್ಧರು, ಮಹಿಳೆಯರು ಮತ್ತು ಮಕ್ಕಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ. ಯಾವುದೇ ಜೀವ ಹಾನಿಯಾದಗಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ. ರಾಜ್ಯದಲ್ಲಿ 4 ಎನ್.ಡಿ.ಆರ್.ಎಫ್, ಮತ್ತು ಎಸ್.ಡಿ.ಆರ್.ಎಫ್ ತಂಡಗಳು ವಿಕೋಪ ನಿರ್ವಹಣೆಗೆ ನೆರವು ನೀಡಲು ಸಿದ್ಧವಾಗಿದ್ದು, ಅಗತ್ಯವಿದ್ದಲ್ಲಿ ಕೂಡಲೇ ನೆರವು ಪಡೆಯಿರಿ ಎಂದ ಸಿಎಂ ಯಡಿಯೂರಪ್ಪ, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ವಿಕೋಪ ತಡೆಗೆ ಅಗತ್ಯವಿರುವ ಸುರಕ್ಷತಾ ಉಪಕರಣಗಳನ್ನು ಹಾಗೂ ಕಾಳಜಿ ಕೇಂದ್ರಗಳನ್ನು ಸಿದ್ಧವಾಗಿಟ್ಟುಕೊಳ್ಳಿ. ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ 24*7 ಕಂಟ್ರೋಲ್ ರೂಂ ಗಳನ್ನು ತೆರೆದು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣದಲ್ಲಿ ಸ್ಪಂದಿಸಿ, ಜನರ ಸ್ಥಳಾಂತರ ಸಂದರ್ಭದಲ್ಲಿ ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಿ ಎಂದರು.

    ಅತಿವೃಷ್ಠಿಯಿಂದ ಹಾನಿಗೊಳಗಾದವರಿಗೆ ಶೀಘ್ರದಲ್ಲಿ ಪರಿಹಾರ ವಿತರಿಸಿ. ಪರಿಹಾರ ವಿತರಣೆಯಲ್ಲಿ ಪಾರದರ್ಶಕತೆ ಇರಲಿ. ವಿಕೋಪ ನಿರ್ವಹಣೆಗೆ ರಾಜ್ಯದಲ್ಲಿ ಯಾವುದೇ ಹಣಕಾಸಿನ ಕೊರತೆ ಇಲ್ಲ. ವಿಕೋಪ ಸಂದರ್ಭದಲ್ಲಿ ಎಲ್ಲಾ ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳ ನೆರವು ಪಡೆಯಿರಿ ಹಾಗೂ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಎಂದು ಸಿಎಂ ಹೇಳಿದರು.

    ಜಿಲ್ಲಾಧಿಕಾರಿ ಜಿ. ಜಗದೀಶ್ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ವಿಕೋಪ ನಿರ್ವಹಣೆಗೆ ಈಗಾಗಲೇ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಯಾವುದೇ ಸಂದರ್ಭವನ್ನು ಎದುರಿಸಲು ಸಿದ್ದರಾಗಿದ್ದೇವೆ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ವಿಪತ್ತು ನಿರ್ವಹಣಾ ಯೋಜನೆಯನ್ನು ಸಿದ್ಧಪಡಿಸಲಾಗಿದೆ. ಮಂಗಳೂರಿನಲ್ಲಿರುವ ಎನ್.ಡಿ.ಆರ್.ಎಫ್ ತಂಡದೊAದಿಗೆ ಸಂಪರ್ಕದಲ್ಲಿದ್ದೇವೆ. ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಹಣೆಗೆ ಅನುಕೂಲವಾಗುವಂತೆ ಅಗತ್ಯವಿರುವ ಗ್ರಾಮ ಪಂಚಾಯತ್ಗಳಿಗೆ ಫೈಬರ್ ದೋಣಿಗಳನ್ನು ನೀಡಲಾಗಿದೆ. 24*7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ತೆರೆಯಲಾಗಿದೆ. ಎಲ್ಲಾ ಅಧಿಕಾರಿಗಳಿಗೆ ಪ್ರಾಕೃತಿಕ ವಿಕೋಪ ತಡೆಯಲು ಸನ್ನದ್ಧರಿರುವಂತೆ ಸೂಚನೆ ನೀಡಲಾಗಿದ್ದು, ಮಾನ್ಸೂನ್ ಅವಧಿಯಲ್ಲಿ ಜಿಲ್ಲೆಯಲ್ಲಿ ಇದುವರೆಗೆ 1 ಜೀವ ಹಾನಿ, 5 ಮನೆಗಳು ಪೂರ್ಣ ನಾಶ, 196 ಮನೆಗಳು ಭಾಗಶಃ ಹಾನಿ, 14 ಕೊಟ್ಟಿಗೆ ಗಳಿಗೆ ಹಾನಿಯಾಗಿದ್ದು, ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 5.90 ಕೋಟಿ ರೂ. ಗಳ ಹಣ ಇದ್ದು, ಹಣದ ಕೊರತೆ ಇಲ್ಲ ಎಂದರು.

    Click here

    Click here

    Click here

    Call us

    Call us

    ವೀಡಿಯೋ ಸಂವಾದದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಸ್ಪಿ ವಿಷ್ಣುವರ್ಧನ್, ನಕ್ಸಲ್ ನಿಗ್ರಹ ಪಡೆಯ ಎಸ್ಪಿ ಅಖಿಲ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರಡು ಮತದಾರರ ಪಟ್ಟಿ ಆಗಸ್ಟ್ 24ರಂದು ಪ್ರಕಟ: ಜಿಲ್ಲಾಧಿಕಾರಿ

    20/08/2026

    ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

    20/08/2026

    ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ

    19/08/2026
    Leave A Reply Cancel Reply

    2 × three =

    Call us

    Click Here

    Call us

    Call us

    Call us
    Highest Viewed Recently
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು
    • ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ
    • ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.