ಕುಂದಾಪುರ: ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿ ಪ್ರಕ್ರಿಯೆಗೆ ಚಾಲನೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ ಎಂಬ ಧ್ಯೇಯವಾಕ್ಯದೊಂದಿಗೆ 2021ನೇ ಸಾಲಿನ ಮಣಿಪಾಲ ಆರೋಗ್ಯ ಕಾರ್ಡ್ ನೊಂದಣಿ ಪ್ರಕ್ರಿಯೆಗೆ ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್ ಎಸ್ ಬಲ್ಲಾಳ್ ಅವರು ವರ್ಚುವಲ್ ವೇದಿಕೆಯ ಮೂಲಕ ಚಾಲನೆ ನೀಡಿದ್ದು, ಆರೋಗ್ಯ ಸೇವೆಗಳಿಗೆ ಈ ಕಾರ್ಡ್ ಉತ್ತಮ ಪ್ರಯೋಜನ ಹೊಂದಿದೆ ಎಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಾರ್ಕೆಟಿಂಗ್ ವಿಭಾಗದ ಉಪ ವ್ಯವಸ್ಥಾಪಕರಾದ ಕೃಷ್ಣಪ್ರಸಾದ್ ಹೇಳಿದರು.

Call us

Click Here

ಅವರು ಶುಕ್ರವಾರ ಕುಂದಾಪುರದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ್ ಹೆಮ್ಮಾಡಿ ಅವರಿಗೆ ಸಾಂಕೇತಿಕವಾಗಿ ಆರೋಗ್ಯ ಕಾರ್ಡ್ ಹಸ್ತಾಂತರಿಸಿದಬಳಿಕ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಅವಿಭಾಜಿತ ದಕ್ಸಿಣ ಕನ್ನಡ ಜಿಲ್ಲೆಯ ಜನರಿಗೆ ಆರಂಭಿಸಿದ ಈ ಯೋಜನೆ ಇಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ ಸೇರಿದಂತೆ ಕರಾವಳಿ ಕರ್ನಾಟಕದ ಮತ್ತು ಮಧ್ಯ ಕರ್ನಾಟಕದ ಸುಮಾರು 12ಕ್ಕೂ ಹೆಚ್ಚು ಜಿಲ್ಲೆಗಳಿಗೆ ವಿಸ್ತರಣೆ ಅಲ್ಲದೇ ಕೇರಳ, ಗೋವಾದಂತಹ ನೆರೆ ರಾಜ್ಯಗಳಿಗೂ ವಿಸ್ತರಣೆ ಆಗಿದೆ. ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯತ್ವವನ್ನು ಪಡೆಯಬಹುದು ಮತ್ತು ಅವರು ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಅವರ ಹೂಡಿಕೆಯನ್ನು ಮರಳಿ ಪಡೆಯಬಹುದಾಗಿದೆ” ಎಂದು ಹೇಳಿದರು.

ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಯಶಸ್ವೀ 20 ವರ್ಷಗಳನ್ನು ಪೂರೈಸಿದ್ದೇವೆ. ಸಾಮಾಜಿಕ ಕಾಳಜಿಯೊಂದಿಗೆ ಉತ್ಕ್ರಷ್ಟ ಗುಣಮಟ್ಟದ ಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ನೀಡುವುದರ ಮೂಲಕ ಈ ಯೋಜನೆಗೆ ಹೆಚ್ಚು ಹೆಚ್ಚು ಸದಸ್ಯರನ್ನು ದಾಖಲಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.

1 ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹300/-, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹600/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹750/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹500/-, ಕುಟುಂಬಕ್ಕೆ ₹800/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ₹950/- ಆಗಿರುತ್ತದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಹಿರಿಯ ವ್ಯವಸ್ಥಾಪಕರಾದ ಕೆ. ಸಚಿನ್ ಕಾರಂತ್, ಮಾರುಕಟ್ಟೆ ವಿಭಾಗದ ಪ್ರತಿನಿಧಿಯಾದ ಅಕ್ಷಯ್ ಕುಮಾರ್, ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಜಾನ್ಸನ್ ಮೊದಲಾದವರು ಉಪಸ್ಥಿತರಿದ್ದರು.

Click here

Click here

Click here

Click Here

Call us

Call us

ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಈ ಕೆಳಗಿನ ರಿಯಾಯಿತಿ ಸೌಲಭ್ಯ ಪಡೆಯಲು ಅವಕಾಶವಿದೆ:
ಹೊರ ರೋಗಿ ವಿಭಾಗದಲ್ಲಿ
ಒಳ ರೋಗಿ ವಿಭಾಗದಲ್ಲಿ
ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆಯಲ್ಲಿ ಶೇಕಡಾ 50 ರಿಯಾಯಿತಿ
ಪ್ರಯೋಗಾಲಯ ಪರೀಕ್ಷೆ ಯಲ್ಲಿ ಶೇಕಡಾ 30 ರಿಯಾಯಿತಿ
ಸಿ ಟಿ, ಎಂ ಆರ್ ಐ, ಅಲ್ಟ್ರಾಸೌಂಡ್ ಗಳಲ್ಲಿ ಶೇಕಡಾ 20 ರಿಯಾಯಿತಿ
ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇಕಡಾ 20 ರಿಯಾಯಿತಿ
ಔಷಧಾಲಯಗಳಲ್ಲಿ ಶೇಕಡಾ 12ರವರೆಗೆ ರಿಯಾಯಿತಿ

ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇಕಡಾ 25 ರಿಯಾಯಿತಿ

ಕೋವಿಡ್ ರೋಗಿಗಳಿಗೆ ಜನರಲ್ ವಾರ್ಡ್ ನಲ್ಲಿ ರೋಗಿಗಳಿಗೆ ಸರ್ಕಾರ ಅನುಮೋದಿತ ಪ್ಯಾಕೇಜ್ ಮೇಲೆ ಶೇಕಡಾ 10 ರಿಯಾಯಿತಿ.

ಕಾರ್ಡ್ ಹೊಂದಿರುವವರು ಕರಾವಳಿ ಕರ್ನಾಟಕ ಮತ್ತು ಗೋವಾದ ಮಣಿಪಾಲ್ ಗ್ರೂಪ್ ಆಸ್ಪತ್ರೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಇದರಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎ ಪೈ ಆಸ್ಪತ್ರೆ ಉಡುಪಿ ಮತ್ತು ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು ಮತ್ತು ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ ಕಟೀಲ್ ಮತ್ತು ಮಣಿಪಾಲ್ ಆಸ್ಪತ್ರೆ ಗೋವಾ, ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ದಂತ ಚಿಕಿತ್ಸಾ ಆಸ್ಪತ್ರೆಗಳಲ್ಲಿ ರಿಯಾಯಿತಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಆರೋಗ್ಯ ಕಾರ್ಡ್ ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದಾಗಿದೆ.

2021ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:
ಕಸ್ತೂರ್ಬಾ ಆಸ್ಪತ್ರೆ ಮಾಹಿತಿ ಕೇಂದ್ರ, ಕುಂದಾಪುರ
ನಾಗರಾಜ್ ಖಾರ್ವಿ– 9916888916,
ರಕ್ಷಿತ್ ಕುಮಾರ್ – 9743366746,
ಸುರೇಖಾ ಪೈ ಕೋಟ – 9880374926
ಕೋಟ ಸಹಕಾರಿ ವ್ಯವಸಾಯಕ ಸಂಘ (ನಿ) – 8453364342,
ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ – 8884459066

Leave a Reply