ಕೋವಿಡ್ 3ನೇ ಅಲೆ ಎದುರಿಸಲು ಮಕ್ಕಳ ಸಮಾಲೋಚಕರಿಗೆ ತರಬೇತಿ: ಜಿಲ್ಲಾಧಿಕಾರಿ ಜಿ. ಜಗದೀಶ್

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಕೋವಿಡ್ 3ನೇ ಅಲೆಯು ಮಕ್ಕಳನ್ನು ಬಾಧಿಸಬಹುದಾದ ಹಿನ್ನಲೆಯಲ್ಲಿ, ಮಕ್ಕಳೊಂದಿಗೆ ಮಕ್ಕಳ ಸ್ನೇಹಿಯಾಗಿ ಬೆರೆತು, ಅವರೊಂದಿಗೆ ಆಪ್ತಸಮಾಲೋಚನೆ ನಡೆಸಿ, ಕೋವಿಡ್ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ, ಮಕ್ಕಳ ಸಮಾಲೋಚಕರಿಗೆ ಅಗತ್ಯ ತರಬೇತಿ ಕಾರ್ಯಕ್ರಮಗಳನ್ನು ಆದ್ಯತೆಯ ಮೇರೆಗೆ ಆಯೋಜಿಸಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.

Call us

Click Here

ಅವರು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಹ ಮಕ್ಕಳ ಸಮಾಲೋಚಕರನ್ನು ನೇಮಿಸಿ. ಮಕ್ಕಳ ಸಮಾಲೋಚಕರಾಗಿ ಕಾರ್ಯನಿರ್ವಹಿಸಲು ಆಸಕ್ತರಿರುವ ಎಂ.ಎಸ್.ಡಬ್ಯೂ ಮತ್ತು ಮನ:ಶಾಸ್ತ್ರದ ವಿದ್ಯಾರ್ಥಿಗಳಿಗೆ, ಮಕ್ಕಳೊಂದಿಗೆ ಬೆರೆತು, ಮಕ್ಕಳು ಕೋವಿಡ್ ಮಾರ್ಗಸೂಚಿಗಳ ಪಾಲನೆ ಮತ್ತು ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುವಂತೆ ಮನವೊಲಿಸುವ ವಿಧಾನಗಳ ಬಗ್ಗೆ ಸೂಕ್ತ ತರಬೇತಿ ನೀಡಿ, ಅವರನ್ನು ಟೆಲಿಕೌನ್ಸಿಲಿಂಗ್ ಸೇವೆಗಳಿಗೆ ಸಹ ನಿಯೋಜಿಸಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.

ಮಕ್ಕಳ ಸಹಾಯವಾಣಿ ಸಂಖ್ಯೆ 1098 ಬಗ್ಗೆ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಅರಿವು ಮೂಡಿಸಿ. ಪಿಡಿಓಗಳು, ಆಶಾಕಾರ್ಯಕತೆಯರು, ಹಿರಿಯ ಆರೋಗ್ಯ ಸಹಾಯಕಿಯರಿಗೆ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿ. ಶಾಲೆಗಳು ಆರಂಭವಾದ ಕೂಡಲೇ ಶಾಲಾ ಮುಖ್ಯೋಪಧ್ಯಾಯರಿಗೆ ಸಹ ತರಬೇತಿ ಆಯೋಜಿಸಿ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಬಾಲ ನ್ಯಾಯ ಮಂಡಳಿಯಲ್ಲಿ 2021ರ ಜೂನ್ ಅಂತ್ಯದವರೆಗೆ ಬಾಕಿ ಇದ್ದ 23 ಪ್ರಕರಣಗಳಲ್ಲಿ 1 ಪ್ರಕರಣ ಇತ್ಯರ್ಥಗೊಂಡಿದ್ದು, ಪೊಕ್ಸೋ 8, ಅಪಘಾತ 3 ಸೇರಿದಂತೆ ಇತರೆ ಒಟ್ಟು 22 ಪ್ರಕರಣ ಬಾಕಿ ಇವೆ, ಮಕ್ಕಳ ಕಲ್ಯಾಣ ಸಮಿತಿಯ ಮುಂದೆ 26 ಪ್ರಕರಣಗಳು ಬಂದಿದ್ದು, ೧೫ನ್ನು ಮಕ್ಕಳ ಪಾಲನಾ ಸಂಸ್ಥೆಗಳಿಗೆ, 2 ಬೇರೆ ಜಿಲ್ಲೆಗೆ, 9 ಪೋಷಕರ ವಶಕ್ಕೆ ಬಿಡುಗಡೆ ಮಾಡಲಾಗಿದ್ದು, ಜಿಲ್ಲೆಯಲ್ಲಿಒಟ್ಟು 28 ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ 132 ಮಕ್ಕಳಿದ್ದಾರೆ , ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಶೇಷಪ್ಪ ಮಾಹಿತಿ ನೀಡಿದರು.

Click here

Click here

Click here

Click Here

Call us

Call us

ಮಹಿಳೆ ಮತ್ತು ಮಕ್ಕಳ ಕಾಣೆ ಪ್ರಕರಣ ಬೇಗ ಪತ್ತೆ ಹಚ್ಚಿ
ಜಿಲ್ಲೆಯಲ್ಲಿ ಮಹಿಳೆ ಮತ್ತು ಮಕ್ಕಳ ಕಾಣೆಯಾಗುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಆದಷ್ಟು ಶೀಘ್ರದಲ್ಲಿ ಅವರನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು.

ವಿವಿಧ ಕಾರಣಗಳಿಂದ ಕಾಣೆಯಾಗುವ ಮಹಿಳೆ ಮತ್ತು ಮಕ್ಕಳನ್ನು ಶೀಘ್ರದಲ್ಲಿ ಪತ್ತೆ ಹಚ್ಚದಿದ್ದಲ್ಲಿ ಅವರು ಅಪಾಯಕಾರಿ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆಗಳಿದ್ದು, ತನಿಖಾಧಿಕಾರಿಗಳು ಆದಷ್ಟು ಶೀಘ್ರದಲ್ಲಿ ಇಂತಹ ಪ್ರಕರಣಗಳನ್ನು ಪತ್ತೆಹಚ್ಚುವ ಮೂಲಕ, ಅವರ ರಕ್ಷಣೆ ಮಾಡಬೇಕು, ಇಂತಹ ಪ್ರಕರಣಗಳ ಪತ್ತೆಗೆ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ವಿಶೇ ಕರ್ತವ್ಯದಲ್ಲಿ ನಿಯೋಜಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.

ಜಿಲ್ಲೆಯ ವಲಸೆ ಕಾರ್ಮಿಕರಲ್ಲಿ ಬಾಲ್ಯ ವಿವಾಹ ನಡೆಯುವ ಸಾಧ್ಯತೆಗಳಿದ್ದು ಈ ಬಗ್ಗೆ ನಿಗಾವಹಿಸಿ, ಅವರು ವಾಸಿಸುವ ಪ್ರದೇಶದಲ್ಲಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ. ಶಾಲಾ ಮಕ್ಕಳು 10 ದಿನಗಳಿಗಿಂತ ಹೆಚ್ಚು ಗೈರು ಹಾಜರಾದಲ್ಲಿ ,ಅಂತಹ ಮಕ್ಕಳ ಮಾಹಿತಿಯನ್ನು ಶಾಲೆಗಳಿಂದ ಪಡೆದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಕಳುಹಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರ ಮೂಲಜಿಲ್ಲೆ, ವಿಳಾಸ ಕುರಿತಾದ ಅವರ ಸಮರ್ಪಕ ಮಾಹಿತಿಯನ್ನು ಸಂಗ್ರಹಿಸಲು ಪ್ರಯತ್ನಿಸಿ ಎಂದರು.

ಕುಂದಾಪುರ ಮಹಿಳಾ ಸಾಂತ್ವನ ಕೇಂದ್ರದಲ್ಲಿ 2021ರ ಜೂನ್ ಅಂತ್ಯದವರೆಗೆ ಬಾಕಿ ಇದ್ದ 63 ಪ್ರಕರಣಗಳಲ್ಲಿ 24 ಪ್ರಕರಣ ಇತ್ಯರ್ಥಗೊಂಡಿದ್ದು, 16ಸಾಂತ್ವನ ಕೇಂದ್ರದಲ್ಲಿ ಮತ್ತು 23 ನ್ಯಾಯಾಲಯದಲ್ಲಿ ಬಾಕಿ ಇವೆ. ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಶೇಷಪ್ಪ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಮಕ್ಕಳ ರಕ್ಷಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply