ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕಳೆದ ಎರಡು ವರ್ಷಗಳಿಂದ ಕರೋನಾ ಅನೇಕರ ಜೀವಗಳನ್ನು ಬಲಿ ತೆಗೆದುಕೊಂಡಿದ್ದು, ಸಹಸ್ರಾರು ಕುಟುಂಬಗಳನ್ನು ಬೀದಿ ಪಾಲು ಮಾಡಿದೆ. ಈ ವರ್ಷ ಕರೋನಾ ಎರಡನೇ ಅಲೆಯಲ್ಲಿ ಅತಿ ಹೆಚ್ಚು ಪ್ರಾಣ ಹಾನಿಯಾಗಿದ್ದು, ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಮೇಲೆ ಪರಿಣಮ ಬೀರುವ ಸಾಧ್ಯತೆ ಇದೆ ಎಂದು ತಜ್ಞ ವೈದ್ಯರು ವಿಶ್ಲೇಷಿಸುತ್ತಿದ್ದಾರೆ. ಕರೋನಾ ೩ನೇ ಅಲೆಯನ್ನು ಎದುರಿಸುವ ಸಲುವಾಗಿ ಮಕ್ಕಳನ್ನು ರಕ್ಷಿಸಲು, ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಮಾತೆಯರು ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ. ದೈನಂದಿನ ಜೀವನದಲ್ಲಿ ಯೋಗ, ಪ್ರಾಣಾಯಾಮಗಳನ್ನು ಅಳವಡಿಸಿಕೊಂಡು ಮಕ್ಕಳಿಗೂ ಕೂಡ ಇದನ್ನು ಕಲಿಸಿಕೊಡಬೇಕಿದೆ. ಕರೋನಾವನ್ನು ಧೈರ್ಯದಿಂದ ಎದುರಿಸಲು ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ ಮಕ್ಕಳ ಅರೋಗ್ಯಕರ ಜೀವನಕ್ಕೆ ಪೂರಕವಾದ ಚಟುವಟಿಕೆಗಳನ್ನು ನಿರಂತವಾಗಿ ಮಾಡಬೇಕು ಎಂದು ಸಂಪನ್ಮೂಲ ವ್ಯಕ್ತಿ ಡಾ. ಶಿಲ್ಪಾ ಹೇಳಿದರು.
ರಾಷ್ಟ್ರ ಸೇವಿಕಾ ಸಮಿತಿ ಕುಂದಾಪುರ ಮತ್ತು ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಜರುಗಿದ ಯುವ ಮಾತಾ ಜಾಗೃತಿ ಸಮಾವೇಶದಲ್ಲಿ ಅವರು ಮಾಹಿತಿ ನೀಡಿ ಮಾತನಾಡಿದರು.
ಶಿಶು ಮಂದಿರದ ಅಧ್ಯಕ್ಷೆ ಸವಿತಾ ಯು.ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯೋಪಾಧ್ಯಾಯಿನಿ ಸುಮನಾ ಪಡಿಯಾರ್ ಶುಭಾಶಂಸನೆಗೈದರು. ಶಿಶು ಮಂದಿರದ ಸದಸ್ಯೆ ಅಶ್ವಿತಾ ಜಿ.ಪೈ ಉಪಸ್ಥಿತರಿದ್ದರು.
ಸವಿತಾ ದೇವಾಡಿಗ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ರಾಷ್ಟ್ರ ಸೇವಿಕಾ ಸಮಿತಿಯ ತಾಲೂಕು ಕಾರ್ಯವಾಹಿಕಾ ಕಲ್ಪನಾ ಭಾಸ್ಕರ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಶು ಮಂದಿರದ ಸದಸ್ಯೆ ವಿಜಯಶ್ರೀ ವಿ.ಆಚಾರ್ಯ ವಂದಿಸಿದರು.