ಸಕಾಲ ಸೇವೆಗಳ ಅಡಿ ಅರ್ಜಿ ವಿಲೇವಾರಿಯಲ್ಲಿ ಉಡುಪಿ ಜಲ್ಲೆ ಪ್ರಥಮ ಸ್ಥಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಸಕಾಲ ಯೋಜನೆಯಡಿಯ ವಿಳಂಬ ರಹಿತ ಅರ್ಜಿ ವಿಲೇವಾರಿಯಲ್ಲಿ ಉಡುಪಿ ಜಿಲ್ಲೆಯು ಜುಲೈ ಮಾಹೆಯಲ್ಲಿಯೇ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಮುಂದಿನ ದಿನಗಳಲ್ಲಿಯೂ ಉತ್ತಮವಾಗಿ ಕಾರ್ಯ ನಿರ್ವಹಿಸುವುದರೊಂದಿಗೆ ಪ್ರಥಮ ಸ್ಥಾನ ಹೊಂದಬೇಕು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅಧಿಕಾರಿಗಳಿಗೆ ತಿಳಿಸಿದರು.

Call us

Click Here

ಅವರು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸಕಾಲ ಯೋಜನೆಯ ಅನುಷ್ಠಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಸಕಾಲ ಯೋಜನೆಯು ನಾಗರಿಕರಿಗೆ ಸರಕಾರದ ಸೇವೆಯನ್ನು ನಿಗದಿತ ಕಾಲಾವಧಿಯಲ್ಲಿ ಒದಗಿಸುವ ಪ್ರಮುಖ ಯೋಜನೆಯಲ್ಲಿ ಒಂದಾಗಿದ್ದು, ಸಾರ್ವಜನಿಕರು ಸರಕಾರದ 101 ವಿವಿಧ ಇಲಾಖೆಗಳಲ್ಲಿ 1,112 ಸೇವೆಗಳಿಗೆ ನಿಗದಿತ ಪ್ರಮಾಣದಲ್ಲಿ ಅರ್ಜಿ ಸಲ್ಲಿಸಿ, ಸೇವೆಯ ಪ್ರಯೋಜನೆವನ್ನು ಪಡೆದುಕೊಳ್ಳಬಹುದಾಗಿದೆ ಎಂದರು.

ಸಾರ್ವಜನಿಕರು ಸಕಾಲದಡಿಯಲ್ಲಿ ನಿಗದಿತ ಅರ್ಜಿಯನ್ನು ಸಲ್ಲಿಸಿದಾಗ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸಲ್ಲಿಸಿದಾಗ ಶೀಘ್ರದಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ. ಎಂದ ಅವರು ಅಧಿಕಾರಿಗಳು ನಿಗದಿತ ಕಾಲಾವಧಿಯಲ್ಲಿ ಅವುಗಳನ್ನು ತಡವಿಲ್ಲದೇ ವಿಲೇವಾರಿ ಮಾಡಬೇಕು ಎಂದರು.

ವಿವಿಧ ಸೇವೆಗಳನ್ನು ಪಡೆಯಲು ನಾಗರಿಕರು ಸಲ್ಲಿಸುವ ಅರ್ಜಿಗಳ ತಿರಸ್ಕಾರದ ಪ್ರಮಾಣವನ್ನು ಆದಷ್ಟು ಕಡಿಮೆ ಮಾಡಬೇಕು. ಸಕಾರಣವಿಲ್ಲದೆ ಯಾವುದೇ ಅರ್ಜಿಗಳನ್ನು ತಿರಸ್ಕಾರ ಮಾಡಬಾರದು ಒಂದೊಮ್ಮೆ ತಿರಸ್ಕಾರ ಮಾಡುವಾಗ ಸರಿಯಾದ ಕಾರಣವನ್ನು ನೀಡಬೇಕು ಎಂದರು.

Click here

Click here

Click here

Click Here

Call us

Call us

ಪ್ರಸ್ತುತ ಮಾಹೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಸರ್ಕಾರದ ಅಡಿಯಲ್ಲಿ 59,237 ಅರ್ಜಿಗಳು ಬಂದಿದ್ದು ಅವುಗಳಲ್ಲಿ 52,511 ಅರ್ಜಿಗಳು ಪುರಸ್ಕೃತಗೊಮಡು 1,094 ಅರ್ಜಿಗಳು ತಿರಸ್ಕೃತಗೊಂಡಿವೆ ಎಂದರು.

ಸಕಾಲ ಯೋಜನೆಯು 2011 ರಿಂದ ರಾಜ್ಯದಲ್ಲಿ ಜಾರಿಗೆ ಬಂದಿದ್ದು ಈವರೆಗೆ 6.53 ಕೋಟಿ ಅರ್ಜಿಗಳು ಬಂದಿದ್ದು ಅವುಗಳಲ್ಲಿ 5.98 ಕೋಟಿಯಷ್ಟು ಪುರಸ್ಕೃತಗೊಂಡು 45.02 ಲಕ್ಷ ತಿರಸ್ಕೃತಗೊಂಡು 6.43 ಕೋಟಿ ವಿಲೇವಾರಿಯಾಗಿದೆ ಎಂದರು. ಈವರೆಗೆ ಜಿಲ್ಲೆಯಲ್ಲಿ 14.15 ಲಕ್ಷ ಅರ್ಜಿಗಳು ಬಂದಿದ್ದು, ಅವುಗಳಲ್ಲಿ 13.58 ರಷ್ಟು ಅರ್ಜಿಗಳು ಪುರಸ್ಕೃತಗೊಂಡು 42,194 ಅರ್ಜಿಗಳು ವಿಲೇವಾರಿಗೊಂಡಿವೆ ಎಂದರು.

ಅಧಿಕಾರಿಗಳು ಮುತುವರ್ಜಿ ವಹಿಸಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ವಿಲೇವಾರಿ ವಿಳಂಬ ಮಾಡಿದವರಿಗೆ ದಂಡ ವಿಧಿಸುವ ಅವಕಾಶವಿದೆ, ಅಲ್ಲದೇ ವಿಳಂಬ ವಾದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂದರು.

ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಕಾಲ ಯೋಜನೆಯ ನೋಡೆಲ್ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply