ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗ್ರಾಮದ ಮೇಲ್‌ಗಂಗೊಳ್ಳಿ ಸರಕಾರಿ ಕಿರಿಯ ಪ್ರಾಥಮಿಕ (ಹವೇ) ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ಕೆನರಾ ಬ್ಯಾಂಕಿನ ನಿವೃತ್ತ ಅಧಿಕಾರಿ ಜಿ.ಪ್ರಮೋದ ಗಾಣಿಗ ಶನಿವಾರ ವಿತರಿಸಿದರು.
ಶಾಲೆಯ ಮುಖ್ಯೋಪಾಧ್ಯಾಯ ರಮೇಶ ಮಹಾಲೆ, ಸಹಶಿಕ್ಷಕಿ ಲಲಿತಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಿ.ಈಶ್ವರ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರಾಘವೇಂದ್ರ, ಉಪಾಧ್ಯಕ್ಷೆ ರೇಖಾ, ಎಸ್‌ಡಿಎಂಸಿ ಸದಸ್ಯರು, ಪೋಷಕರು ಮತ್ತಿತರರು ಉಪಸ್ಥಿತರಿದ್ದರು.