ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ ರಾಜ್ಯದ ಕ್ರೀಡಾ ಪೋಷಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿರುತ್ತದೆ.
ಕಳೆದ ಮೂರು ವರ್ಷಗಳಿಂದ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಕ್ಷೇತ್ರದಲ್ಲಿ ಸಾಧನೆಗೈದ ಕ್ರೀಡಾ ಪೋಷಕರು ಆಗಸ್ಟ್ 25 ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; 0820-2521324, 94808-86467 ನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2020ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ 2020ನೇ ಸಾಲಿನ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಕ್ರೀಡಾ ಪಟುಗಳು ಅರ್ಜಿ ನಮೂನೆಯನ್ನು ಆಗಸ್ಟ್ 25 ರೊಳಗೆ ಸಲ್ಲಿಸುವಂತೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.