ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಶೇ.100 ಫಲಿತಾಂಶ ದಾಖಲಿಸುವ ಮೂಲಕ ಉತ್ತಮ ಸಾಧನೆ ಮಾಡಿದೆ.
ಪರೀಕ್ಷೆಗೆ ಹಾಜರಾದ ಒಟ್ಟು 48 ವಿದ್ಯಾರ್ಥಿಗಳ ಪೈಕಿ 16 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಭಾರ್ಗವ ಮಧ್ಯಸ್ಥ 617 ಅಂಕ ಗಳಿಸುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಮಾನ್ಯತಾ ವಿ.ಶೇಟ್ (608), ವೈಷ್ಣವಿ ಕೋಟೆಗಾರ್ (607), ಪ್ರಿಯಾಂಕ ಕೆ.ಬೈಂದೂರು (606), ಕೀರ್ತಿ ಭಟ್ (604), ಅಮೀಕ್ಷಾ ಡಿ.ನಾಯ್ಕ್ (603) ಮತ್ತು ಬಿ.ಸಾಹೀಲ್ (602) ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ.