ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕುಂದಗನ್ನಡ(ಕುಂದಾಪುರ ಕನ್ನಡ)ದ ಅಧ್ಯಯನಕ್ಕಾಗಿ ಪ್ರತ್ಯೇಕ ಪೀಠ ಸ್ಥಾಪಿಸಿ, ವಿಶೇಷ ಅನುದಾನ ಮೀಸಲಿಡುವಂತೆ ಕೋರಿ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಸಿದ್ದಾರೆ.
ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿರುವ ಹೆಗ್ಡೆ ಅವರು, ಉಡುಪಿ ಜಿಲ್ಲೆಯ ಕುಂದಾಪುರ ಪ್ರದೇಶದ ಜನರ ಭಾಷೆಯಾಗಿರುವ ಕುಂದಗನ್ನಡ ಅಧ್ಯಯನಕ್ಕೆ ಮಂಗಳೂರು ವಿವಿಯಲ್ಲಿ ಅಧ್ಯಯನ ಪೀಠವೊಂದನ್ನು ಸ್ಥಾಪಿಸಬೇಕು. ಈ ಸಂಬಂಧ ವಿವಿ ಸಿಂಡಿಕೇಟ್ ಕೂಡ ಒಪ್ಪಿಗೆ ನೀಡಿದೆ. ಅಧ್ಯಯನ ಪೀಠಕ್ಕೆ ಸರಕಾರದಿಂದ 25 ಲಕ್ಷ ರೂ. ಅನುದಾನ ಮೀಸಲಿಡುವಂತೆ ಕೋರಿಕೊಂಡಿದ್ದಾರೆ.
ಮುಖ್ಯಮಂತ್ರಿಗಳು ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ. ಇದೇ ವೇಳೆ ಜಯಪ್ರಕಾಶ್ ಹೆಗ್ಡೆ ಅವರು ಕುಂದಾಪುರ ಕನ್ನಡದ (ಕುಂದಗನ್ನಡ) ನಿಘಂಟನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೀಡಿದರು.