ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕಗಳನ್ನು ಪಡೆದು ಅತ್ಯುನ್ನತ ಸಾಧನೆ ಮಾಡಿದ ಶ್ರೇಯಾ ಮೇಸ್ತ ಅವರನ್ನು ಗಂಗೊಳ್ಳಿಯ ಸ್ಟೆಲ್ಲಾ ಮಾರೀಸ್ ಪ್ರೌಢಶಾಲೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಗಂಗೊಳ್ಳಿಯ ಖಾರ್ವಿಕೇರಿಯಲ್ಲಿರುವ ಶ್ರೇಯಾ ಅವರ ಮನೆಗೆ ತೆರಳಿದ ಶಾಲೆಯ ಆಡಳಿತ ಮಂಡಳಿಯ ಜಂಟಿ ಕಾರ್ಯದರ್ಶಿ ಜ್ಯೋತಿ ಎ.ಸಿ. ಅವರು ಶಾಲೆಯ ವತಿಯಿಂದ ಶ್ರೇಯಾ ಮೇಸ್ತ ಹಾಗೂ ಸಂಜಯ್ ಮೇಸ್ತ ಅವರನ್ನು ಸನ್ಮಾನಿಸಿ ಗೌರವಿಸಿದರು. ಗಂಗೊಳ್ಳಿ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ಸೌಪರ್ಣಿಕ, ಶಾಲೆಯ ಮುಖ್ಯ ಶಿಕ್ಷಕಿ ಕ್ರೆಸೆನ್ಸ್, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು, ಪುರುಷೋತ್ತಮ ಮೇಸ್ತ, ಪವಿತ್ರಾ ಮೇಸ್ತ ಮತ್ತಿತರರು ಉಪಸ್ಥಿತರಿದ್ದರು.