ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಟೊಯೋಟಾ ಇನ್ನೊವಾದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವಾಹನ ಬೈಂದೂರು ಪೊಲೀಸರು ವಶಕ್ಕೆ ಪಡೆದು ಅದರಲ್ಲಿದ್ದ ಗೋವುಗಳನ್ನು ರಕ್ಷಿಸಿದ ಘಟನೆ ನಾಗೂರಿನಲ್ಲಿ ನಡೆದಿದೆ.
ಭಟ್ಕಳ ಕಡೆ ಹೋಗುತ್ತಿದ್ದ ಇನ್ನೊವಾ ಟೊಯೋಟಾ ವಾಹನ ನಾಗೂರಿನಲ್ಲಿ ಕೆಟ್ಟು ಮಧ್ಯ ದಾರಿಯಲ್ಲಿ ನಿಂತಿದ್ದ ಸಂದರ್ಭ ಸಾರ್ವಜನಿಕರು ವಾಹನವನ್ನು ಪರಿಶೀಲಿಸಿದಾಗ ಅದರಲ್ಲಿ ಗೋವುಗಳು ಇರುವುದು ಗಮನಕ್ಕೆ ಬರುತ್ತಿದ್ದಂತೆ ತಕ್ಷಣವೇ ಬೈಂದೂರು ಪೋಲಿಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ನಾಲ್ಕು ದನದ ರಕ್ಷಣೆ ಮಾಡಿದ್ದಾರೆ. ಆರೋಪಿ ಪರಾರಿಯಾಗಿದ್ದು ಪೋಲಿಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.