ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ, ಅ12: ಜಿಲ್ಲೆಯಲ್ಲಿ ಗುರುವಾರ ದಾಖಲೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ಏರಿಕೆ ಕಂಡಿದೆ. ಇಂದು 191 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 96, ಕುಂದಾಪುರ, ಬೈಂದೂರು ತಾಲೂಕಿನ 49, ಕಾರ್ಕಳ, ಹೆಬ್ರಿ ತಾಲೂಕಿನ 45 ಮಂದಿಗೆ ಹಾಗೂ ಹೊರ ಜಿಲ್ಲೆಯ ಓರ್ವ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.
ಒಟ್ಟು 191 ಪ್ರಕರಣಗಳಲ್ಲಿ 95 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 156 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ.
ಇಂದು ಕುಂದಾಪುರ ತಾಲೂಕಿನ 79 ವರ್ಷದ ವೃದ್ಧೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 136 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 1259 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 5756 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ಜಿಲ್ಲೆಯಲ್ಲಿ ಇಂದು 2,416 ಮಂದಿಗೆ ಮೊದಲನೇ ಡೋಸ್, 2,185 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ ಒಟ್ಟು 5,60,694 ಮಂದಿಗೆ ಮೊದಲ ಡೋಸ್ ಹಾಗೂ 2,04,955 ಮಂದಿಗೆ ಎರಡನೇ ಡೋಸ್ ವಾಕ್ಸಿನ್ ನೀಡಲಾಗಿದೆ.
ಸೂಚನೆ: ಕುಂದಾಪುರ & ಬೈಂದೂರು ತಾಲೂಕನ್ನು ಸೇರಿಸಿ ಕುಂದಾಪುರ ಎಂದೂ, ಉಡುಪಿ, ಬ್ರಹ್ಮಾವರ, ಕಾಪು ಸೇರಿಸಿ ಉಡುಪಿ ಎಂದೂ, ಕಾರ್ಕಳ & ಹೆಬ್ರಿ ತಾಲೂಕನ್ನು ಸೇರಿಸಿ ಕಾರ್ಕಳ ಎಂದು ಆರೋಗ್ಯ ಇಲಾಖೆ ಪರಿಗಣಿಸಿದೆ.