ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ಹಾಗೂ ಇದರ ವಿರುದ್ದ ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವರ ಕಚೇರಿಗೆ ಮಾರ್ಚ್ ನಡೆಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷರ ಸಹಿತ ವಿದ್ಯಾರ್ಥಿಗಳ ಬಂಧನವಾಗಿದ್ದು, ತಕ್ಷಣ ಬಿಡುಗಡೆಗೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಕುಂದಾಪುರ ಜಿಲ್ಲಾ ಸಮಿತಿಯ ವತಿಯಿಂದ ಕುಂದಾಪುರದಲ್ಲಿ ಪ್ರತಿಭಟನೆ ನಡೆಯಿತು.
ಜಿಲ್ಲಾ ಮುಖಂಡರಾದ ನವಾಜ್ ಶೇಕ್ ಮಾತನಾಡಿ, ಹೊಸ ಶಿಕ್ಷಣ ನೀತಿಯನ್ನು ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಚರ್ಚೆ ನಡೆಸದೆ, ತಾರಾತುರಿಯಲ್ಲಿ ಹಿಂಬಾಗಿಲಿನ ಮೂಲಕ ಜಾರಿಗೊಳಿಸಲು ಸರಕಾರವು ಹೊರಟಿದೆ. ಇದು ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಇದು ಸಂಪೂರ್ಣವಾಗಿ ಶಿಕ್ಷಣ ವ್ಯವಸ್ಥೆಯನ್ನು ಕೇಸರಿಕರಣ ಗೊಳಿಸುವ ಮತ್ತು ಖಾಸಗೀಕರಣಗೊಳಿಸುವ ಹುನ್ನಾರವಾಗಿದೆ ಆದ್ದರಿಂದ ಈ ಅಸಮರ್ಪಕ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷರಾದ ಅಸೀಲ್, ಕುಂದಾಪುರ ಜಿಲ್ಲಾ ಸಮಿತಿ ಸದಸ್ಯರಾದ ಝೆಶನ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.