ಯಡ್ತಾಡಿ ಶ್ರೀ ವಿನಾಯಕ ಯುವಕ ಮಂಡಲದಿಂದ ಸ್ವಚ್ಛತಾ ಕಾರ್ಯ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ:
ಯುವಕ ಮಂಡಲದ ಮೊದಲ ಧ್ಯೇಯವಾಗಿ ಸ್ವಚ್ಚತೆಯಾಗಿದ್ದು, ಯುವಕ ಮಂಡಲವು ಸಮಾಜಮುಖಿ ಕಾರ್ಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ, ಶ್ರೀ ವಿನಾಯಕ ಯುವಕ ಮಂಡಲ ಈ ನಿಟ್ಟಿನಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ಉತ್ತಮ ಹೆಜ್ಜೆಯನ್ನಿಡುತ್ತಿದೆ ಎಂದು ಮಹಾತ್ಮ ಗಾಂಧಿ ಫ್ರೌಡಶಾಲೆಯ ಮುಖ್ಯೋಪಾಧ್ಯಯ ಸತೀಶ್ ನಾಯ್ಕ್ ಅವರು ಹೇಳಿದರು.

Call us

Click Here

ಅವರು ಶ್ರೀವಿನಾಯಕ ಯುವಕ ಮಂಡಲ ರಿ. ಸಾಬ್ರಕಟ್ಟೆ-ಯಡ್ತಾಡಿ ಇವರ 75ನೇ ಸ್ವಾತಂತ್ರೋತ್ಸವದ ಅಂಗವಾಗಿ ಮಹಾತ್ಮ ಗಾಂಧಿ ಫ್ರೌಡಶಾಲೆ ಸಾಬ್ರಕಟ್ಟೆಯಲ್ಲಿ ಶಾಲಾ ವಠಾರ ಸ್ವಚ್ಚತೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.

ಈ ಸಂದರ್ಭದಲ್ಲಿ ಪುರೋಹಿತರಾದ ರಾಜೇಶ್ ಐತಾಳ್ ಎತ್ತಿನಟ್ಟೆ, ಯುವಕ ಮಂಡಲದ ಅಧ್ಯಕ್ಷ ರತ್ನಾಕರ ಪೂಜಾರಿ, ನೆಹರು ಯುವ ಕೇಂದ್ರ, ಉಡುಪಿ ಇದರ ಪ್ರದೀಪ್,s ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಶೆಟ್ಟಿ ಕೊಳ್ಕೆಬೈಲು, ಯುವಕ ಮಂಡಲದ ಕಾರ್ಯದರ್ಶಿ ಪ್ರಶಾಂತ್ ಸೂರ್ಯ, ಉಪಾಧ್ಯಕ್ಷ ರಾಜೇಶ್ ದೇವಾಡಿಗ, ಹಾಗೂ ಅಧ್ಯಪಾಕ ವೃಂದ, ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು.

Leave a Reply