ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಮ್ಮ ಯುವ ಪೀಳಿಗೆಗೆ ಕೃಷಿ ಹಾಗೂ ನಮ್ಮ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ಕರ್ತವ್ಯ ಎಲ್ಲರ ಮೇಲಿದೆ. ಈ ಬಗ್ಗೆ ಹಿರಿಯರ ಮೇಲೆ ಹೆಚ್ಚಿನ ಹೊಣೆಗಾರಿಕೆ ಇದೆ ಎಂದು ಕುಂದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ರಾಧಾಕೃಷ್ಣ ರೂಪಂ ಹೇಳಿದರು.
ಲಯನ್ಸ್ ಕ್ಲಬ್ ಕುಂದಾಪುರ ಹಾಗೂ ಮಹಾವಿಷ್ಣು ಯುವಕ ಮಂಡಲ ಇವರ ಜಂಟಿ ಆಶ್ರಯದಲ್ಲಿ ಕಟ್‌ಬೆಲ್ತೂರು ಹರೆಗೋಡು ಸಂಘದ ವಠಾರದಲ್ಲಿ ನಡೆದ ರೈತರಿಗೆ ಕೃಷಿ ಪರಿಕರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕುಂದಾಪುರ ಲಯನ್ಸ್ ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ್ ಕಲ್ಪತರು ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಕೃಷಿಕ ಸೂರ ದೇವಾಡಿಗ, ವಿಶ್ವನಾಥ ಗಾಣಿಗ, ಮರಿಯ ಪೂಜಾರಿ, ಕೃಷ್ಣ ಗಾಣಿಗ, ಸುಬ್ಬ ದೇವಾಡಿಗ, ಸಂಜು ದೇವಾಡಿಗ, ಕೊಗ್ಗ ಗಾಣಿಗ, ಕೃಷ್ಣ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.