Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾಸ್ಕ್ ಧರಿಸದೇ ಓಡಾಡುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆ: ಜಿಲ್ಲಾಧಿಕಾರಿ ಜಿ. ಜಗದೀಶ್
    ಉಡುಪಿ ಜಿಲ್ಲೆ

    ಮಾಸ್ಕ್ ಧರಿಸದೇ ಓಡಾಡುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆ: ಜಿಲ್ಲಾಧಿಕಾರಿ ಜಿ. ಜಗದೀಶ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಕೋವಿಡ್19 ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು, ಸಾರ್ವಜನಿಕ ಸ್ಥಳಗಳಲ್ಲಿ ಪಾಲಿಸಬೇಕಾದ ಶಿಷ್ಟಾಚಾರಗಳ ಬಗ್ಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಸಾರ್ವಜನಿಕರ ಹಿತದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಕರೋನಾ ಸಂಬಂಧಿತ ಸರ್ಕಾರದ ಇತರ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶಿಸಲಾಗಿರುತ್ತದೆ.

    Click Here

    Call us

    Click Here

    ಅದಾಗ್ಯೂ ಜಿಲ್ಲೆಯಲ್ಲಿ ಜನರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರಿ, ತೀರ ನಿರಾಸದಾಯಕ ವರ್ತನೆಯನ್ನು ತೋರುತ್ತಿರುವುದರಿಂದ, ಕರೋನಾ ಸಾಂಕ್ರಮಿಕವು ಜಿಲ್ಲೆಯಲ್ಲಿ ಮತ್ತಷ್ಟು ಹೆಚ್ಚಳವಾಗುತ್ತಿದೆ. ಈ ಮಧ್ಯೆ ಕೋವಿಡ್-19 ರೋಗದ 3 ನೇ ಅಲೆಯು ತಲೆದೋರುತ್ತಿರುವುದನ್ನು ಆರೋಗ್ಯ ಇಲಾಖೆಯು ಎಚ್ಚರಿಸಿರುವುದು ಆತಂಕಕಾರಿ ಸಂಗತಿಯಾಗಿದೆ.

    ಇಂತಹ ಸನ್ನಿವೇಶದಲ್ಲಿ ಸಾರ್ವಜನಿಕರು, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಹಾಗೂ ಇನ್ನಿತರ ಕೋವಿಡ್-19ರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತೀ ಅನಿವಾರ್ಯವಾಗಿದ್ದು, ಜಿಲ್ಲೆಯ ಜನರ ಆರೋಗ್ಯ ಹಿತದೃಷ್ಟಿಯಿಂದ ಸಾರ್ವಜನಿಕರು, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುವಂತೆ ಮಾಡಲು, ಇನ್ನು ಮುಂದೆ ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವ ಜನರನ್ನು ಕಡ್ಡಾಯವಾಗಿ ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುವುದು.

    ಈ ಬಗ್ಗೆ ಜಿಲ್ಲೆಯಲ್ಲಿ ಕೊರೋನಾ ಸಂಬAಧಿತ ನಿಯಮಗಳನ್ನು ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿಯವರಿಂದ ಅಧಿಕಾರ ಪ್ರತ್ಯಾಯೋಜಿಸಲ್ಪಟ್ಟ ಅಧಿಕಾರಿಗಳು, ಸಾರ್ವಜನಿಕರ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಓಡಾಡುವವರನ್ನು ಕಡ್ಡಾಯವಾಗಿ ಹತ್ತಿರದ ಕೋವಿಡ್-19 ಪರೀಕ್ಷಾ ಕೇಂದ್ರಗಳಲ್ಲಿ, ಕೋವಿಡ್-19 ಪರೀಕ್ಷೆಗೆ ಒಳಪಡಿಸುವುದು ಮತ್ತು ಅಂತಹ ವ್ಯಕ್ತಿಗಳ ಸಂಪೂರ್ಣ ಮಾಹಿತಿಯನ್ನು ಪ್ರತಿದಿನ ತಾಲೂಕು ವೈದ್ಯಾಧಿಕಾರಿಗಳಿಗೆ ನೀಡುವುದು.

    ಈ ಸಂಧರ್ಭದಲ್ಲಿ ಪ್ರತಿರೋಧ ಒಡ್ಡುವವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ.

    Click here

    Click here

    Click here

    Click Here

    Call us

    Call us

    ಕಂಟೈನ್ ಮೆಂಟ್ ವಲಯದ ವ್ಯಕ್ತಿಗಳು ಪ್ರಾಥಮಿಕ ಸಂಪರ್ಕಿತರು ಎಂದು ಪರಿಗಣನೆ
    ಜಿಲ್ಲೆಯಲ್ಲಿ ಕೋವಿಡ್19 ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಹಾಗೂ ಜಿಲ್ಲೆಯ ಜನರನ್ನು ಕೋವಿಡ್ ನಿಂದ ರಕ್ಷಿಸುವ ಉದ್ದೇಶದಿಂದ ,ಇನ್ನು ಮುಂದೆ ಕಂಟೈನ್ಮೆಂಟ್ ವಲಯಗಳಲ್ಲಿ ವಾಸಿಸುವವರನ್ನು ಪ್ರಾಥಮಿಕ ಸಂಪರ್ಕಿತರು ಎಂದು ಪರಿಗಣಿಸಿ, ಅಂತಹ ಎಲ್ಲಾ ಪ್ರಾಥಮಿಕ ಸಂಪರ್ಕಿತ ವ್ಯಕ್ತಿಗಳನ್ನು ಕಡ್ಡಾಯವಾಗಿ ಕೋವಿಡ್ 19 ಪರೀಕ್ಷೆಗೆ ಒಳಪಡಿಸಲಾಗುವುದು .

    ಈ ಸಂಧರ್ಭದಲ್ಲಿ ಪ್ರತಿರೋಧ ಒಡ್ಡುವವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    2 × 3 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.