ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಸಾಲಿನ ಕೃಷಿ ಇಲಾಖೆ ವತಿಯಿಂದ ಕೃಷಿ ಪ್ರಶಸ್ತಿ ಹಾಗೂ ರೈತರಿಗೆ ಉತ್ಪಾದನಾ ಬಹುಮಾನ ಕಾರ್ಯಕ್ರಮದಡಿ ಮುಂಗಾರು ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ಪರ್ಧಾ ವಿಜೇತರಿಗೆ,ತಾಲೂಕುಮಟ್ಟದಲ್ಲಿ ಪ್ರಥಮ ರೂ.15000,ದ್ವಿತೀಯ 10000 ತೃತೀಯ 5000 ,ಜಿಲ್ಲಾ ಮಟ್ಟದಲ್ಲಿ ಪ್ರಥಮ ರೂ.30000,ದ್ವಿತೀಯ 25000 ತೃತೀಯ 20000 , ರಾಜ್ಯಮಟ್ಟದಲ್ಲಿ ಪ್ರಥಮ ರೂ.50000,ದ್ವಿತೀಯ 40000 ತೃತೀಯ 35000 ರೂ ಬಹುಮಾನವನ್ನು ರೈತರಿಗೆ ವಿತರಿಸಲಾಗುತ್ತದೆ. ಆಸಕ್ತ ರೈತರು ಅರ್ಜಿ ನಮೂನೆಯನ್ನು ಆಗಸ್ಟ್ 31 ರೊಳಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.










