ಕುಂಭಾಶಿ ಆನೆಗುಡ್ಡೆ ದೇವಳಕ್ಕೆ ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಭೇಟಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಚಿತ್ರ ನಟ ನಿರ್ದೇಶಕ ರಕ್ಷಿತ್ ಶೆಟ್ಟಿ ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ತಾವು ಹೊಸದಾಗಿ ಖರೀದಿಸಿದ ಆಡಿ ಕ್ಯೂ8 ಕಾರಿಗೆ ದೇವರ ಸಮ್ಮುಖದಲ್ಲಿ ಪೂಜೆ ಸಲ್ಲಿಸಿ ಒಂದು ಮುಡಿ ಅಕ್ಕಿ ಕಡುಬಿನ ಹರಕೆಯನ್ನು ದೇವರಿಗೆ ಸಮರ್ಪಿಸಿದರು.

Call us

Click Here

ಈ ಸಂದರ್ಭ ದೇವಳದ ಹಿರಿಯ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ ಅವರು ನಟ ರಕ್ಷಿತ್ ಶೆಟ್ಟಿಯನ್ನು ದೇವಳದ ವತಿಯಿಂದ ಸನ್ಮಾನಿಸಿ ಗೌರವಿಸಿದರು. ಪರ್ಯಾಯ ಅರ್ಚಕ ವೆಂಕಟನಾರಾಯಣ ಉಪಾಧ್ಯಾಯ ಮತ್ತು ಸಹೋದರರು, ಮ್ಯಾನೇಜರ್ ನಟೇಶ್ ಕಾರಂತ್, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Leave a Reply