ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಯಡ್ತೆರೆಯಲ್ಲಿ ಸುಮಾರು 3 ವರ್ಷದ ಹಿಂದೆ ಆರಂಭವಾದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಅವರು ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಮಂಜುರು ಮಾಡಿ ಶಂಕುಸ್ಥಾಪನೆ ಮಾಡಿದ್ದರು. ನಂತರ ಹಾಲಿ ಶಾಸಕರಾದ ಬಿ. ಎಂ. ಸುಕುಮಾರ್ ಶೆಟ್ಟಿ ಅವರು ಕೂಡ ಶಂಕುಸ್ಥಾಪನೆ ಮಾಡಿ ಕೆ.ಎಸ್.ಅರ್.ಟಿ.ಸಿ ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಿದ್ದರು.
ಕಳೆದ ಮೂರು ವರ್ಷಗಳಿಂದ ಈ ಬಸ್ ನಿಲ್ದಾಣ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಶೀಘ್ರವೇ ಈ ಕಾಮಗಾರಿಯನ್ನು ಪೂರ್ಣಗೊಳಿಸಿ ಹಾಗೂ ತಾಲೂಕು ಕೇಂದ್ರವಾದ ಬೈಂದೂರಿಗೆ ಕೆ.ಎಸ್. ಆರ್.ಟಿ.ಸಿ ಬಸ್ ಡಿಪೋ ನಿರ್ಮಿಸುವಂತೆ ಕ್ರಮ ಕೈಗೊಳ್ಳಲು ನಾಗರಿಕರು ಶಾಸಕರು ಹಾಗೂ ಸಂಸದರನ್ನು ಒತ್ತಾಯಿಸಿದ್ದಾರೆ.