ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ತ್ರಾಸಿ ಬೀಚ್ ಸಮೀಪದ ಪಾರ್ಕ್ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗಂಗೊಳ್ಳಿ ಪೋಲಿಸ್ ತಂಡ ದಾಳಿ ನಡೆಸಿ ರವಿರಾಜ್ (46)ನನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.
ತಾಲೂಕು ದಂಡಾಧಿಕಾರಿ ಅವರ ಅನುಮತಿ ಮೇರೆಗೆ ಗಂಗೊಳ್ಳಿ ಪಿಎಸ್ಐ ನಂಜಾ ನಾಯ್ಕ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆತನ ವಶದಲ್ಲಿದ್ದ 3000ರೂ. ಮೌಲ್ಯದ 100 ಗ್ರಾಂ ತೂಕದ ಗಾಂಜಾ, ನಗದು 380 ರೂ. ಸ್ವಾಧೀನಪಡಿಸಿಕೊಳ್ಳಲಾಗಿದೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.