ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ವೆಬ್‌ಸೈಟ್ https://udupi.nic.in/ ನಲ್ಲಿ ಆಗಸ್ಟ್ 27 ರಿಂದ ಸೆಪ್ಟೆಂಬರ್ 20 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.