ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಎಮ್.ಎಮ್.ಹೌಸ್‌ನಿಂದ ವಿವಿಧ ಸಲಕರಣೆ ಹಸ್ತಾಂತರ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ದಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಮ್.ಎಮ್.ಹೌಸ್ ಶಿರೂರು ಇದರ ವತಿಯಿಂದ ಸುಮಾರು 5 ಲಕ್ಷ ರೂಪಾಯಿ ವೆಚ್ಚದ ಸಲಕರಣೆಗಳನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಹಸ್ತಾಂತರಿಸಲಾಯಿತು.

Call us

Click Here

ಬಳಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮದ ಅಭಿವೃದ್ದಿಗೆ ಇಲಾಖೆಗಳ ಜೊತೆಗೆ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ. ಶಿರೂರಿನಂತಹ ಗ್ರಾಮೀಣ ಭಾಗದಲ್ಲಿ ಮಣಿಗಾರ್ ಮೀರಾನ್ ರವರ ಎಮ್.ಎಮ್.ಹೌಸ್ ಇದರ ಕೊಡುಗೆ ಅಪಾರವಾಗಿದೆ. ಊರಿನ ಅಭಿವೃದ್ದಿಗೆ ಇವರ ಕೊಡಗೆ ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಸಹಾಯಕ ಕಮಿಷನರ್ ರಾಜು, ಬಂದೂರು ತಹಶೀಲ್ದಾರ ಶೋಭಾಲಕ್ಷ್ಮೀ ಎಚ್.ಎಸ್., ಶಿರೂರು ಗ್ರಾ.ಪಂ ಅಧ್ಯಕ್ಷೆ ದಿಲ್‌ಶಾದ್ ಬೇಗಂ, ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಪಟೇಲ್, ಗ್ರಾ.ಪಂ ಸದಸ್ಯರಾದ ಮುಕ್ರಿ ಮಹ್ಮದ್ ಅಲ್ತಾಫ್, ಉದಯ ಪೂಜಾರಿ ಮೈದಿನಪುರ, ಪ್ರಸನ್ನ ಕುಮಾರ್ ಶೆಟ್ಟಿ, ರಘುರಾಮ ಕೆ. ಪೂಜಾರಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿವಿಧ ಸಲಕರಣೆಗಳನ್ನು ಕೊಡುಗೆಯಾಗಿ ನೀಡಿದ ಎಮ್.ಎಮ್.ಹೌಸ್‌ನ ಮೀರಾನ್ ಸಾಹೇಬ್ ಅವರ ಪರವಾಗಿ ಸಹೋದರರಾದ ಮಣೆಗಾರ್ ಮಹ್ಮದ್ ಜಿಪ್ರಿಯವರನ್ನು ಹಾಗೂ ನಮ್ಮ ಕುಂದಾಪ್ರ ಬಳಗದ ಸಾಧನ್‌ದಾಸ್ ಅವರನ್ನು ಆಸ್ಪತ್ರೆಯ ವತಿಯಿಂದ ಸಮ್ಮಾನಿಸಲಾಯಿತು.

ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಹನಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತ ಅರುಣ ಕುಮಾರ್ ಶಿರೂರು ಕಾರ್ಯಕ್ರಮ ನಿರ್ವಹಿಸಿದರು. ಸಿಬ್ಬಂದಿ ನಾಗರಾಜ ವಂದಿಸಿದರು.

Click here

Click here

Click here

Click Here

Call us

Call us

Leave a Reply