ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಧಾರ್ಮಿಕ ಆಚರಣೆಗಳನ್ನು ನಡೆಯಬೇಕು ಎನ್ನುವುದರ ಬಗ್ಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆದರೆ ಆಚರಣೆಯ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು ಸ್ವಯಂ ನಿಯಂತ್ರಣ ಹಾಕಿಕೊಳ್ಳುವುದು ಅಗತ್ಯ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.
ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಹಾಗೂ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಗಳಿಗೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಸೋಂಕು ಹರಡುವಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ನಿಯಮವಳಿಗಳನ್ನು ರೂಪಿಸಿ ರಾಜ್ಯ ಸರಕಾರಗಳಿಗೆ ಸುತ್ತೊಲೆ ಕಳುಹಿಸಿದೆ. ಧಾರ್ಮಿಕ ಆಚರಣೆಗಳಿಗೆ ಚ್ಯುತಿ ಬಾರದಂತೆ, ಸರಕಾರದ ಮಾರ್ಗಸೂಚಿ ಪಾಲಿಸಿಕೊಂಡು ಹಬ್ಬವನ್ನು ಆಚರಿಸುವುದು ಒಳ್ಳೆಯದು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಲ್ಲಾ ಅಕಾಡೆಮಿಯಲ್ಲಿ ಹೊಸತನ ತರುವ ಪ್ರಯತ್ನ ಮಾಡುತ್ತಿದೆ. ಈ ಬಗ್ಗೆ ಇಲಾಖೆಯ ನಿರ್ದೇಶಕರುಗಳೊಂದಿಗೆ ಸಭೆ ನಡೆಸಲಾಗಿದೆ. ಎಲ್ಲಾ ಅಕಾಡೆಮಿಗಳಿಗೆ ಜೀವ ತುಂಬುವ ಕಾರ್ಯವನ್ನು ಮಾಡುತ್ತೇನೆ ಎಂದರು.
ಕೊಲ್ಲೂರು ಹಾಗೂ ಹಟ್ಟಿಯಂಗಡಿ ದೇವಸ್ಥಾನಳಿಗೆ ಕುಟುಂಬಿಕರೊಂದಿಗೆ ಭೇಟಿ ನೀಡಿದ ಸಚಿವ ವಿ. ಸುನಿಲ್ ಕುಮಾರ್ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಹಟ್ಟಿಯಂಗಡಿಯಲ್ಲಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಧರ್ಮದರ್ಶಿ ಬಾಲಚಂದ್ರ ಭಟ್ ಸಚಿವರನ್ನು ಗೌರವಿಸಿದರು. ಈ ಸಂದರ್ಭ ತಾ.ಪಂ ಮಾಜಿ ಸದಸ್ಯ ಕರಣ ಪೂಜಾರಿ, ಹಟ್ಟಿಯಂಗಡಿ ಗ್ರಾ.ಪಂ ಅಧ್ಯಕ್ಷೆ ಅಮೃತಾ ಶೆಟ್ಟಿ, ಸದಸ್ಯ ಚಂದ್ರ ಮೊಗವೀರ ಮೊದಲಾದವರು ಇದ್ದರು.













