ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ೨೭ ವರ್ಷಗಳಂದ ಆಯಾ ಆಗಿ ಕಾರ್ಯನಿರ್ವಹಿಸಿ ನಿವೃತ್ತರಾಗುತ್ತಿರುವ ಪ್ರೇಮಾ ಇವರನ್ನು ಇಲಾಖಾ ವತಿಯಿಂದ ಸನ್ಮಾನಿಸಲಾಯಿತು. ಇಲಾಖಾ ಪ್ರತಿನಿಧಿಯಾಗಿ ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಶೆಟ್ಟಿ ಸನ್ಮಾನ ನೆರವೇರಿಸಿ ನಿವೃತ್ತರ ಅರ್ಪಣಾ ಮನೋಭಾವ, ಶಾಲೆಯ ಕುರಿತಾದ ಕಾಳಜಿಯನ್ನು ಶ್ಲಾಘಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಎಸ್ ಡಿ ಎಂ ಸಿ ಅಧ್ಯಕ್ಷ ಮಂಜುನಾಥ ಎ.ಜಿ. ನಿವೃತ್ತರ ಸೇವಾವೈಖರಿ ಪ್ರಶಂಸಿಸಿದರು. ಮುಖ್ಯ ಶಿಕ್ಷಕ ಚಂದ್ರ ನಾಯ್ಕ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕಿ ಆಶಾ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್ ವಂದಿಸಿದರು.